ಬೆಳಗಾವಿ ಸುವರ್ಣಸೌಧದಲ್ಲಿ ‘ಅನುಭವ ಮಂಟಪದ’ ತೈಲವರ್ಣ ಚಿತ್ರ‌ ಅನಾವರಣಗೊಳಿಸಿದ ಸಿಎಂ ಸಿದ್ಧರಾಮಯ್ಯ

ಬೆಳಗಾವಿ, ಡಿ.9: ಸುವರ್ಣಸೌಧದ ಮೊದಲ ಮಹಡಿಯಲ್ಲಿ ವಿಶ್ವದ ಮೊದಲ ಸಂಸತ್ತು ಎಂಬ ಖ್ಯಾತಿಯ “ಅನುಭವ ಮಂಟಪದ” ಬೃಹತ್ ತೈಲವರ್ಣ ಚಿತ್ರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಅನಾವರಣಗೊಳಿಸಿದರು.                                        ಈ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ವಿಧಾನಸಭೆಯ ಸಭಾಧ್ಯಕ್ಷರಾದ ಯು.ಟಿ.ಖಾದರ್, ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ, ಗೃಹ ಸಚಿವ ಡಾ.‌ಜಿ. ಪರಮೇಶ್ವರ್, ಸಚಿವರಾದ ಹೆಚ್.ಕೆ.ಪಾಟೀಲ್, ಕೆ.ಹೆಚ್.ಮುನಿಯಪ್ಪ, ಈಶ್ವರ್ ಖಂಡ್ರೆ, ಲಕ್ಷ್ಮೀ ಹೆಬ್ಬಾಳ್ಕರ್, ಮುಖ್ಯಮಂತ್ರಿಯವರ ಆರ್ಥಿಕ ಸಲಹೆಗಾರರಾದ ಬಸವರಾಜ್ ರಾಯರೆಡ್ಡಿ, ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಉಪಸ್ಥಿತರಿದ್ದರು‌.

—–