ಬಳ್ಳಾರಿ,ಡಿ.10:ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾದ ಡಾ.ನಾಗಲಕ್ಷ್ಮಿ ಚೌದರಿ ಅವರು, ಡಿ.12, 13 ಮತ್ತು 14 ರಂದು ಬಳ್ಳಾರಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳುವರು.
ಡಿ.11 ರಂದು ರಾತ್ರಿ 9.50 ಗಂಟೆಗೆ ಬೆಂಗಳೂರಿನಿಂದ ರೈಲಿನ ಮೂಲಕ ಹೊರಟು ಡಿ.12 ರಂದು ಬೆಳಿಗ್ಗೆ 06 ಗಂಟೆಗೆ ಬಳ್ಳಾರಿಗೆ ತಲುಪುವರು.
ಡಿ.12 ರಂದು ಬೆಳಿಗ್ಗೆ 9.30 ಗಂಟೆಗೆ ಬಳ್ಳಾರಿ ಜಿಲ್ಲಾ ಆಸ್ಪತ್ರೆ ಹಾಗೂ ಬಳ್ಳಾರಿ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಕೇಂದ್ರ(ಬಿಮ್ಸ್)ಕ್ಕೆ ಭೇಟಿ ನೀಡುವರು. ಬಳಿಕ ಬೆಳಿಗ್ಗೆ 11 ಗಂಟೆಗೆ ಸಾವನ್ನಪ್ಪಿರುವ ಬಾಣಂತಿಯರ ಮನೆಗೆ ಭೇಟಿ ನೀಡುವರು. ಮಧ್ಯಾಹ್ನ 2.30 ಗಂಟೆಗೆ ಬಳ್ಳಾರಿಯಿಂದ ಹೊರಟು, 3.15 ಗಂಟೆಗೆ ಬಳ್ಳಾರಿ ತಾಲ್ಲೂಕು ಬೆಣೆಕಲ್ ಗ್ರಾಮಕ್ಕೆ ಭೇಟಿ ನೀಡುವರು. ನಂತರ ಬಳ್ಳಾರಿಯಲ್ಲಿ ವಾಸ್ತವ್ಯ ಮಾಡುವರು.
ಡಿ.13 ರಂದು ಬೆಳಿಗ್ಗೆ 10 ಗಂಟೆಗೆ ಬಳ್ಳಾರಿಯ ಇಂದಿರಾನಗರಕ್ಕೆ ಭೇಟಿ ನೀಡುವರು. ಮಧ್ಯಾಹ್ನ 2 ಗಂಟೆಗೆ ನೂತನ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಮಹಿಳಾ ಪ್ರಗತಿ ಪರಿಶೀಲನಾ ಸಭೆ ನಡೆಸುವರು. ಬಳಿಕ ಮಧ್ಯಾಹ್ನ 3.30 ಗಂಟೆಗೆ ಪ್ರತಿಕಾಗೋಷ್ಠಿ ನಡೆಸುವರು.
ನಂತರ ಸಂಜೆ 5 ಗಂಟೆಗೆ ಹಿಂದುಳಿದ ವರ್ಗಗಳ ಬಾಲಕಿಯರ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯಕ್ಕೆ ಭೇಟಿ ನೀಡುವರು. ಬಳಿಕ ವಾಸ್ತವ್ಯ ಮಾಡುವರು.
ಡಿ.14 ರಂದು ಬೆಳಿಗ್ಗೆ 10 ಗಂಟೆಗೆ ಬಳ್ಳಾರಿಯ ಮಹಿಳಾ ಪ್ರಥಮ ದರ್ಜೆ ಕಾಲೇಜಿಗೆ ಭೇಟಿ ನೀಡಿ ವಿದ್ಯಾರ್ಥಿನಿಯರು ಹಾಗೂ ಮಹಿಳಾ ಬೋಧಕರೊಂದಿಗೆ ಸಂವಾದ ನಡೆಸುವರು. ಮಧ್ಯಾಹ್ನ 12 ಗಂಟೆಗೆ ಬೆಂಗಳೂರು ರಸ್ತೆಯಲ್ಲಿರುವ ಫೋಲಾಕ್ ಜೀನ್ಸ್ ಗಾರ್ಮೆಂಟ್‌ಗೆ ಭೇಟಿ ನೀಡಿ, ಮಹಿಳಾ ಕಾರ್ಮಿಕರ ಸಮಸ್ಯೆಗಳನ್ನು ಆಲಿಸಿ, ಮಹಿಳಾ ಕಾರ್ಮಿಕರೊಂದಿಗೆ ಸಂವಾದ ನಡೆಸುವರು.
ಬಳಿಕ ಸಂಜೆ 5 ಗಂಟೆಗೆ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಮಹಿಳಾ ವಸತಿ ನಿಲಯಕ್ಕೆ ಭೇಟಿ ನೀಡುವರು. ನಂತರ ರಾತ್ರಿ 10.55 ಗಂಟೆಗೆ ಬಳ್ಳಾರಿಯಿಂದ ರೈಲಿನ ಮೂಲಕ ಬೆಂಗಳೂರಿಗೆ ಪ್ರಯಾಣಿಸುವರು ಅವರು ಅಧ್ಯಕ್ಷರ ಆಪ್ತ ಕಾರ್ಯದರ್ಶಿಯವರು ತಿಳಿಸಿದ್ದಾರೆ.
———