ಇಲ್ಲಿ
ಯಾರು ಮುಖ್ಯರಲ್ಲ;
ಯಾರು ಅಮುಖ್ಯರಲ್ಲ;
ಯಾವುದೂ ಯಃಕಶ್ಚಿತವಲ್ಲ!
ಇಲ್ಲಿ
ಯಾವುದದಕ್ಕೂ ಮೊದಲಿಲ್ಲ;
ಯಾವುದಕ್ಕೂ ತುದಿಯಿಲ್ಲ;
ಯಾವುದೂ ಎಲ್ಲಿಯೂ ನಿಲ್ಲುವೂದು ಇಲ್ಲ;
ಕೊನೆಮುಟ್ಟುವುದೂ ಇಲ್ಲ!
ಇಲ್ಲಿ
ಅವಸರವೂ ಸಾವಧಾನದ ಬೆನ್ನೇರಿದೆ!
ಇಲ್ಲಿ
ಎಲ್ಲದಕ್ಕೂ ಇದೆ ಅರ್ಥ;
ಯಾವುದೂ ಅಲ್ಲ ವ್ಯರ್ಥ;
ನೀರೆಲ್ಲ ಊ ತೀರ್ಥ!
-ಶ್ರೀ ಕುವೆಂಪು
—–