ಬಳ್ಳಾರಿ, ಜ.9: ರಾಜ್ಯ ಕಂದಾಯ ಇಲಾಖೆಯ ವತಿಯಿಂದ ಆರಂಭಿಸಲಾಗಿರುವ ಭೂ ಸುರಕ್ಷಾ ಕಾರ್ಯಕ್ರಮದ ಅಡಿಯಲ್ಲಿ ನೂತನ ಭೂ ದಾಖಲೆಗಳ ಇ- ಖಜಾನೆಯನ್ನು ಶಾಸಕ ನಾರಾ ಭರತ್ ರೆಡ್ಡಿ ಉದ್ಘಾಟಿಸಿದರು.
ಗುರುವಾರ ನಗರದ ಅನಂತಪುರ ರಸ್ತೆಯಲ್ಲಿರುವ ನೂತನ ಜಿಲ್ಲಾಡಳಿತ ಭವನದಲ್ಲಿ ಏರ್ಪಡಿಸಿದ್ದ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿದರು.
ತಹಶೀಲ್ದಾರ್ ಸಿ. ಗುರುರಾಜ ಅವರು ಶಾಸಕ ನಾರಾ ಭರತ್ ರೆಡ್ಡಿ ಅವರಿಗೆ ಭೂ ಸುರಕ್ಷಾ ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿದರು.
ತಾಲ್ಲೂಕು ಕಚೇರಿ, ಸರ್ವೇ ಮತ್ತು ನೋಂದಣಿ ಇಲಾಖೆಗಳ ಎಲ್ಲಾ ಭೂ ದಾಖಲೆಗಳ ಡಿಜಟಲೀಕರಣ ಮಾಡುವ ಉದ್ದೇಶದಿಂದ ರಾಜ್ಯ ಸರ್ಕಾರ ಈ ಕಾರ್ಯಕ್ರಮ ಆರಂಭಿಸಿದೆ. ಹಳೆಯ ದುಃಸ್ಥಿತಿಯಲ್ಲಿರುವ ಭೂ ದಾಖಲೆಗಳನ್ನು ಶಾಶ್ವತ ಡಿಜಿ ದಾಖಲೆಗಳಾಗಿ ಪರಿವರ್ತಿಸುವುದು, ರೆಕಾರ್ಡ್ ರೂಂಗಳಿಂದ ದಾಖಲೆ ಪಡೆದುಕೊಳ್ಳಲು ಇರುವ ತೊಂದರೆಗಳ ನಿವಾರಣೆ, ಹಳೆಯ ದಾಖಲೆಗಳ ಸಂರಕ್ಷಣೆ ಹಾಗೂ ಕಳುವು- ತಿದ್ದುಪಡಿ ನಿಯಂತ್ರಣ ಮಾಡುವುದು ಸೇರಿದಂತೆ ಹಲವು ಪ್ರಯೋಜನಗಳನ್ನು ಇನ್ನು ಮುಂದೆ ಸಾರ್ವಜನಿಕರು ಪಡೆಯಬಹುದಾಗಿದೆ.
—–