ಚಿತ್ರದುರ್ಗ: “ಮತದಾನಕ್ಕಿಂತ ಇನ್ನೋಂದಿಲ್ಲ, ನಾನು ಖಚಿತವಾಗಿ ಮತದಾನ ಮಾಡುವೆ” ಎಂಬ ಘೋಷವಾಕ್ಯದೊಂದಿಗೆ ಜ.25ರಂದು ರಾಷ್ಟ್ರೀಯ ಮತದಾರರ ದಿನ

ಚಿತ್ರದುರ್ಗ, ಜ.9:‌ ಇದೇ ಜ.25ರಂದು ರಾಷ್ಟ್ರೀಯ ಮತದಾರರ ದಿನ ಆಚರಿಸಲಾಗುವುದು. ರಾಷ್ಟ್ರೀಯ ಮತದಾರರ ದಿನಾಚರಣೆ ಅಂಗವಾಗಿ ಅಂದು ಬೆಳಿಗ್ಗೆ 9.30ಕ್ಕೆ ನಗರದ ಒನಕೆ ಓಬವ್ವ ವೃತ್ತದಿಂದ ತರಾಸು ರಂಗಮಂದಿರದವರೆಗೂ ಶಾಲಾ ಮಕ್ಕಳಿಂದ ಜಾಗೃತಿ ಜಾಥಾ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದರು.

ಈ ಕುರಿತು ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ನಡೆಸಿ ಅವರು ಮಾತನಾಡಿದರು.
“ಮತದಾನಕ್ಕಿಂತ ಇನ್ನೋಂದಿಲ್ಲ, ನಾನು ಖಚಿತವಾಗಿ ಮತದಾನ ಮಾಡುವೆ” ಎಂಬ ಘೋಷವಾಕ್ಯದೊಂದಿಗೆ ಈ ಬಾರಿ ರಾಷ್ಟ್ರೀಯ ಮತದಾರರ ದಿನ ಆಚರಿಸಲಾಗುತ್ತಿದ್ದು, ನಗರದ ತರಾಸು ರಂಗಮಂದಿರದಲ್ಲಿ ಬೆಳಿಗ್ಗೆ 10.30ಕ್ಕೆ ವೇದಿಕೆ ಕಾರ್ಯಕ್ರಮ ನಡೆಯಲಿದ್ದು, ರಾಷ್ಟ್ರೀಯ ಮತದಾರರ ದಿನಾಚರಣೆ ಅಂಗವಾಗಿ ಎಲ್ಲ ಸರ್ಕಾರಿ ಕಚೇರಿಗಳಲ್ಲಿಯೂ ಪ್ರತಿಜ್ಞಾವಿಧಿ ಸ್ವೀಕರಿಸಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ಈ ಸಂದರ್ಭದಲ್ಲಿ ಜಿ.ಪಂ.ಸಿಇಓ ಎಸ್.ಜೆ.ಸೋಮಶೇಖರ್, ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಉಪವಿಭಾಗಾಧಿಕಾರಿ ಎಂ.ಕಾರ್ತಿಕ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎಸ್.ಜೆ.ಕುಮಾರಸ್ವಾಮಿ ಸೇರಿದಂತೆ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.