ರಾಜನಹಳ್ಳಿ: 7ನೇ ವರ್ಷದ ಶ್ರೀ ಮಹರ್ಷಿ ವಾಲ್ಮೀಕಿ ಜಾತ್ರಾ ಮಹೋತ್ಸವಕ್ಕೆ ರಾಜ್ಯ ಗೃಹ ಸಚಿವ ಡಾ.‌ಜಿ. ಪರಮೇಶ್ವರ್ ಚಾಲನೆ

ದಾವಣಗೆರೆ, ಫೆ.9: ಜಿಲ್ಲೆಯ ಹರಿಹರ ತಾಲ್ಲೂಕಿನ ರಾಜನಹಳ್ಳಿಯ ವಾಲ್ಮೀಕಿ ಗುರುಪೀಠದಲ್ಲಿ ಜರುಗಿದ 7ನೇ ವರ್ಷದ ಶ್ರೀ ಮಹರ್ಷಿ ವಾಲ್ಮೀಕಿ ಜಾತ್ರಾ ಮಹೋತ್ಸವದ ಕಾರ್ಯಕ್ರಮವನ್ನು ರಾಜ್ಯ ಗೃಹ ಸಚಿವ ಡಾ. ಜಿ.ಪರಮೇಶ್ವರ್ ಅವರು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಶ್ರೀ ವಾಲ್ಮೀಕಿ ಮಹರ್ಷಿಗಳವರ ಪುತ್ಥಳಿಗೆ ಪುಷ್ಪಾರ್ಚನೆ‌ ಮೂಲಕ ಭಕ್ತಿಪೂರ್ವಕ ನಮನ ಸಲ್ಲಿಸಿದೆ. ಮಾಜಿ ಸಂಸದರು, ನಟರಾದ ಶಶಿಕುಮಾರ್ ಅವರಿಗೆ ‘ಮದಕರಿ ನಾಯಕ ಪ್ರಶಸ್ತಿ’ ನೀಡಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ವಾಲ್ಮೀಕಿ ಪೀಠದ ಪೀಠಾಧಿಪತಿ ಪರಮಪೂಜ್ಯ ಶ್ರೀ ಪ್ರಸನ್ನಾನಂದಪುರಿ ಸ್ವಾಮೀಜಿ, ಪಂಚಮಸಾಲಿ ಪೀಠದ ವಚನಾನಂದ ಶ್ರೀಗಳು ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿದ್ದರು. ಸಚಿವರಾದ ಸತೀಶ್ ಜಾರಕಿಹೊಳಿ, ಹೆಚ್.ಸಿ.ಮಹದೇವಪ್ಪ, ಸಂಸದರಾದ ಈ.ತುಕರಾಂ, ಶಾಸಕ ದೇವೇಂದ್ರಪ್ಪ, ರಾಜಾ ವೇಣುಗೋಪಾಲ್ ನಾಯಕ್, ವಿಧಾನ ಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಅವರು ಉಪಸ್ಥಿತರಿದ್ದರು.