ಬಳ್ಳಾರಿ, ಮಾ.25: ಸಾರ್ವಜನಿಕರಿಂದ ದೂರು ಬಂದ ಹಿನ್ನೆಲೆಯಲ್ಲಿ ಗಾಂಧಿನಗರದಲ್ಲಿರುವ ಮಹಾನಗರ ಪಾಲಿಕೆಯ ವಲಯ ಕಚೇರಿಗೆ ಶಾಸಕ ನಾರಾ ಭರತ್ ರೆಡ್ಡಿ ಅವರು ಮಂಗಳವಾರ ಮಧ್ಯಾಹ್ನ ದಿಢೀರ್ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದರು.
ಈ ವೇಳೆ ವಲಯ ಆಯುಕ್ತ ಗುರುರಾಜ್ ಅವರನ್ನು ತರಾಟೆಗೆ ತೆಗೆದುಕೊಂಡ ಶಾಸಕ ನಾರಾ ಭರತ್ ರೆಡ್ಡಿ, ಸಾರ್ವಜನಿಕರಿಗೆ ಸಮಯಕ್ಕೆ ಸರಿಯಾಗಿ ಕೆಲಸ ಮಾಡಿ ಕೊಡುವಂತೆ ಸೂಚಿಸಿದರು. ಬಿ ಖಾತೆಗೆ ಸಂಬಂಧಿಸಿ ಸಾರ್ವಜನಿಕರು ಶಾಸಕರಿಗೆ ದೂರು ನೀಡಿದ್ದರು.
ಬೀದಿ ಬದಿ ವ್ಯಾಪಾರಸ್ಥರಿಗೆ ಸ್ಪಂದನೆ: ನಗರದ 9ನೇ ವಾರ್ಡಿನ ಕಣೇಕಲ್ ಬಸ್ ನಿಲ್ದಾಣದ ಬಳಿಯ ಬೀದಿ ಬದಿ ವ್ಯಾಪಾರಸ್ಥರು ಹಲವು ರೀತಿಯ ಸಮಸ್ಯೆ ಎದುರಿಸುತ್ತಿದ್ದರು. ಈ ಬಗ್ಗೆ ಸಾರ್ವಜನಿಕರು ಕೆಲವು ದಿನಗಳ ಹಿಂದೆ ಅಹವಾಲು ಸಲ್ಲಿಸಿದ್ದರು.
ಈ ಸಂದರ್ಭ ಪಾಲಿಕೆಯ ಸದಸ್ಯ ಜಬ್ಬಾರ್, ಕಾಂಗ್ರೆಸ್ ಮುಖಂಡ ಚಾನಾಳ್ ಶೇಖರ್ ಮೊದಲಾದವರು ಹಾಜರಿದ್ದರು.