ಕೊಪ್ಪಳ, ಏ.1 : ನಗರದ ಶ್ರೀ ಗವಿಸಿದ್ದೇಶ್ವರ ಕಲಾ ವಿಜ್ಞಾನ ವಾಣಿಜ್ಯ ಕಾಲೇಜುನಲ್ಲಿ ನಡೆಯುತ್ತಿರುವ ಸ್ನಾತಕೋತ್ತರ ಪರೀಕ್ಷಾ ಕೇಂದ್ರಕ್ಕೆ ಕೊಪ್ಪಳ ವಿವಿಯ ಕುಲಪತಿ ಪ್ರೊ.ಬಿ.ಕೆ.ರವಿ ಅವರು ಮಂಗಳವಾರ ಭೇಟಿ ನೀಡಿ ಪರಿಶೀಲಿಸಿದರು.
ಕಾಲೇಜಿನ ಪ್ರಾಂಶುಪಾಲ ಡಾ.ಚನ್ನಬಸವ ಅವರು ಕುಲಪತಿಗಳನ್ನು ಸ್ವಾಗತಿಸಿ, ಪರೀಕ್ಷಾ ಸಿದ್ದತೆ, ಪರೀಕ್ಷಾ ಸಂದರ್ಭದಲ್ಲಿ ಕೈಗೊಂಡಿರುವ ಕ್ರಮ ಹಾಗೂ ಯಾವುದೇ ಘಟನೆಗೂ ಅವಕಾಶವಿಲ್ಲದಂತೆ ಸುಗಮ ಪರೀಕ್ಷಾ ಪ್ರಕ್ರಿಯೆ ನಡೆಸಲು ಕೈಗೊಂಡ ಕ್ರಮಗಳನ್ನು ವಿವರಿಸಿದರು.
ಕುಲಪತಿ ಪ್ರೊ.ಬಿ.ಕೆ.ರವಿ ಮಾತನಾಡಿ, ಗುಣಮಟ್ಟದ ಶಿಕ್ಷಣ, ವಿದ್ಯಾರ್ಥಿಗಳಿಗೆ ಸೌಲಭ್ಯ ಹಾಗೂ ಕಟ್ಟುನಿಟ್ಟಿನ ಪರೀಕ್ಷಾ ವ್ಯವಸ್ಥೆಯಲ್ಲಿ ರಾಜಿಯಾಗದಂತೆ ಸೂಚಿಸಿದರು ಹಾಗೂ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳ ಆರೋಗ್ಯದ ಹಿತದೃಷಿಯಿಂದ ಬಾಯಾರಿಕೆ ಹಾಗೂ ದೇಹದಲ್ಲಿ ನೀರಿನ ಪ್ರಮಾಣ ಕಡಿಮೆಯಾಗದಂತೆ ಮುನ್ನೆಚ್ಚರಿಕೆ ವಹಿಸಿ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸುವಂತೆ ತಿಳಿಸಿದರು.
ಪ್ರಾಧ್ಯಾಪಕರಾದ ಕವಿತಾ ಹೆಚ್ ಹಾಗೂ ವಿವಿಧ ವಿಭಾಗದ ಉಪನ್ಯಾಸಕರು ಇದ್ದರು.