ಬಳ್ಳಾರಿ: ಮಹಾನಗರ ಪಾಲಿಕೆಯ ವತಿಯಿಂದ ಪಾಲಿಕೆಯ ಕೆಲವೊಂದು ಸೇವೆಗಳನ್ನು ಸಕಾಲ ಅಧಿನಿಯಮದಡಿಯಲ್ಲಿ ತರಲಾಗಿದ್ದು, ನಗರದ ನಾಗರೀಕರಿಗೆ ಈ ಸಕಾಲ ಸಪ್ತಾಹ ಕಾರ್ಯಕ್ರಮವನ್ನು ಅರಿವು ಮೂಡಿಸಲು ಇದೇ ಡಿ.19ರವರೆಗೆ ಸಕಾಲ ಸಪ್ತಾಹ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಪಾಲಿಕೆಯು ಆಯುಕ್ತೆ ಪ್ರೀತಿ ಗೆಹ್ಲೋಟ್ ಅವರು ತಿಳಿಸಿದ್ದಾರೆ.
ಈ ಸಕಾಲ ಸಪ್ತಾಹ ಕಾರ್ಯಕ್ರಮದಲ್ಲಿ ಸಾರ್ವಜನಿಕರು ಜನನ ಮತ್ತು ಮರಣ ಸೇವೆಗಳನ್ನು ಪಡೆಯಲು ಅರ್ಜಿಗಳನ್ನು ಸಲ್ಲಿಸಿ ನಿಗದಿತ ಅವಧಿಯೊಳಗೆ ಸೇವೆ ಪಡೆಯಬಹುದಾಗಿದೆ. ಸಾರ್ವಜನಿಕರು ಈ ಸದಾವಕಾಶವನ್ನು ಸದುಪಯೋಗ ಪಡೆದುಕೊಳ್ಳಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.