ಬಳ್ಳಾರಿಯಲ್ಲಿ ಡಿ. 16ರಂದು ಜನಪರ ಉತ್ಸವ -ಸಿದ್ದಲಿಂಗೇಶ ಕೆ ರಂಗಣ್ಣವರ್

ಬಳ್ಳಾರಿ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಾಂಸ್ಕೃತಿಕ ಸಮುಚ್ಚಯದ ಆವರಣದಲ್ಲಿ ನವೀಕರಿಸಿದ ಉದ್ಯಾನವನದ ಉದ್ಘಾಟನೆ ಹಾಗೂ ವಿಶೇಷ ಘಟಕ ಯೋಜನೆಯಡಿ ಜನಪರ ಉತ್ಸವ ಇದೇ ಡಿ.16 ರಂದು ಜರುಗಲಿದೆ.
ಕಾರ್ಯಕ್ರಮವನ್ನು ಬುಧವಾರ ಸಂಜೆ 5 ಕ್ಕೆ ನಗರದ ಡಾ.ರಾಜ್‍ಕುಮಾರ್ ರಸ್ತೆಯಲ್ಲಿರುವ ಸಾಂಸ್ಕೃತಿಕ ಸಮುಚ್ಚಯ ಆವರಣದ ಬಯಲು ರಂಗಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಸಿದ್ದಲಿಂಗೇಶ ಕೆ. ರಂಗಣ್ಣವರ ಅವರು ತಿಳಿಸಿದ್ದಾರೆ.
ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆನಂದ ಸಿಂಗ್ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.
ಬಳ್ಳಾರಿ ನಗರ ಶಾಸಕ ಜಿ.ಸೋಮಶೇಖರ ರೆಡ್ಡಿ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಜಿಪಂ ಅಧ್ಯಕ್ಷೆ ಭಾರತಿ ತಿಮ್ಮಾರೆಡ್ಡಿ, ಸಂಸದರಾದ ವೈ.ದೇವೇಂದ್ರಪ್ಪ, ಜಿ.ಎಂ.ಸಿದ್ದೇಶ್ವರ್, ಕರಡಿ ಸಂಗಣ್ಣ, ಡಾ.ಸೈಯದ್ ನಾಸೀರ್ ಹುಸೇನ್, ಶಾಸಕರಾದ ಈ.ತುಕರಾಂ, ಬಿ.ನಾಗೇಂದ್ರ, ಪಿ.ಟಿ.ಪರಮೇಶ್ವರ್ ನಾಯಕ್, ಎನ್.ವೈ.ಗೋಪಾಲಕೃಷ್ಣ, ಭೀಮಾನಾಯ್ಕ್ ಎಲ್‍ಬಿಪಿ, ಕೆ.ಸಿ.ಕೊಂಡಯ್ಯ, ಅಲ್ಲಂ ವೀರಭದ್ರಪ್ಪ, ಜಿ.ಕರುಣಾಕರರೆಡ್ಡಿ, ಎಂ.ಎಸ್.ಸೋಮಲಿಂಗಪ್ಪ, ಜೆ.ಎನ್.ಗಣೇಶ್, ಎಸ್.ವಿ.ರಾಮಚಂದ್ರ, ಡಾ.ಚಂದ್ರಶೇಖರ್ ಪಾಟೀಲ್, ಶಶೀಲ್ ನಮೋಶಿ, ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಹೆಚ್.ಹನುಮಂತಪ್ಪ, ತಾಪಂ ಅಧ್ಯಕ್ಷೆ ಎಸ್.ಆರ್.ಲೀಲಾವತಿ, ಬುಡಾ ಅಧ್ಯಕ್ಷ ದಮ್ಮೂರು ಶೇಖರ್ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.
ಜಿಲ್ಲಾಧಿಕಾರಿ ಎಸ್.ಎಸ್.ನಕುಲ್, ಜಿಲ್ಲಾ ಪೊಲೀಸ್‍ವರಿಷ್ಠಾಧಿಕಾರಿ ಸೈದುಲು ಅಡಾವತ್, ಜಿಪಂ ಸಿಇಒ ಕೆ.ಆರ್.ನಂದಿನಿ, ಮಹಾನಗರ ಪಾಲಿಕೆ ಆಯುಕ್ತೆ ಪ್ರೀತಿ ಗೆಹ್ಲೋಟ್, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ನಿರ್ದೇಶಕ ಎಸ್.ರಂಗಪ್ಪ, ಇಲಾಖೆಯ ಜಂಟಿ ನಿರ್ದೇಶಕಿ ಬನಶಂಕರಿ ಅಂಗಡಿ ವಿಶೇಷ ಆಹ್ವಾನಿತರಾಗಿ ಆಗಮಿಸಲಿದ್ದಾರೆ.
ಜನಪದ ಉತ್ಸವದಲ್ಲಿ ಹಗಲುವೇಷ, ಸಿಂಧೋಳ್ ಕುಣಿತ, ಕಹಳೆ ವಾದನ, ನಂದಿ ಧ್ವಜ, ಚಿಟ್ಟಿಮೇಳ, ಮಹಿಳಾ ಡೊಳ್ಳು ಕುಣಿತ, ಸುಗಮ ಸಂಗೀತ, ಯುಗಳ ನೃತ್ಯ, ತತ್ವಪದಗಳು, ಸಾಂಪ್ರಾದಾಯಿಕ ಹಾಡುಗಳು, ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ, ಬುರ್ರಕಥಾ, ತೊಗಲುಗೊಂಬೆ, ಪಟಕುಣಿತ, ಕರಗ ಕುಣಿತ, ಲಂಬಾಣಿ ನೃತ್ಯ ಸೇರಿದಂತೆ ವಿವಿಧ ಕಲಾತಂಡಗಳು ಪ್ರದರ್ಶನ ನೀಡಲಿವೆ ಎಂದು ಅವರು ತಿಳಿಸಿದ್ದಾರೆ.
*****