ಹೊಸಪೇಟೆ: ನಗರದ ಒಳಾಂಗಣ ಕ್ರೀಡಾ ಸಂಕೀರ್ಣದಲ್ಲಿ ಜಿಲ್ಲಾ ಖನಿಜ ನಿಧಿ ಅಡಿ 1.44 ಕೋಟಿ ರೂ.ವೆಚ್ಚದಲ್ಲಿ ನಿರ್ಮಾಣ ಮಾಡಲಾಗುತ್ತಿರುವ ವಿವಿಧ ಕಾಮಗಾರಿಗಳನ್ನು ಅರಣ್ಯ,ಪರಿಸರ,ಜೀವಿಶಾಸ್ತ್ರ ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಆನಂದಸಿಂಗ್ ಅವರು ಮಂಗಳವಾರ ಪರಿಶೀಲನೆ ನಡೆಸಿದರು.
ಸ್ಕೇಟಿಂಗ್ ಅಂಕಣ ನಿರ್ಮಾಣ,
ಒಳಾಂಗಣ ಬ್ಯಾಡ್ಮಿಂಟನ್ ಕ್ರೀಡಾಂಗಣ ನವೀಕರಣ ದುರಸ್ತಿ ಮತ್ತು ಕಾಮಗಾರಿ,ಈಜುಕೋಳ ದುರಸ್ತಿ ಮತ್ತು ನವೀಕರಣ, ಸಭಾಂಗಣದ ನವೀಕರಣ ಕಾಮಗಾರಿಗಳನ್ನು ಸಚಿವರು ವೀಕ್ಷಿಸಿದರು.
ಯಾವುದೇ ರೀತಿಯಲ್ಲಿ ಗುಣಮಟ್ಟದಲ್ಲಿ ರಾಜಿಯಾಗದಂತೆ ಕಾಮಗಾರಿಯನ್ನು ನಿಗದಿಪಡಿಸಿದ ಅವಧಿಯೊಳಗೆ ಮುಗಿಸಬೇಕು ಎಂದು ನಿರ್ಮಿತಿ ಕೇಂದ್ರದ ಅಧಿಕಾರಿಗಳಿಗೆ ಸೂಚಿಸಿದರು.
ಕ್ರೀಡಾಂಗಣಕ್ಕೆ ಆಗಮಿಸುವ ಪ್ರೇಕ್ಷಕರಿಗೆ ಆಸನ ವ್ಯವಸ್ಥೆಯೂ ಸಮರ್ಪಕವಾಗಿ ಮಾಡುವಂತೆ ಸೂಚಿಸಿದರು.
ಈ ಸಂದರ್ಭದಲ್ಲಿ ನಿರ್ಮಿತಿ ಕೇಂದ್ರದ ಅಧಿಕಾರಿ ಗನಿಸಾಬ್, ಮುಖಂಡ ದರ್ಮೆಂದ್ರಸಿಂಗ್ ಸೇರಿದಂತೆ ಅನೇಕರು ಇದ್ದರು.