ಚಿಗುರು-2020 ಮಕ್ಕಳಲ್ಲಿ ಅಡಗಿರುವ ಪ್ರತಿಭೆ ಗುರುತಿಸಿ ಪ್ರೋತ್ಸಾಹಿಸಿ:ಬುಡಾ ಅಧ್ಯಕ್ಷ ದಮ್ಮೂರು ಶೇಖರ್

ಬಳ್ಳಾರಿ: ಬೆಳೆಯುವ ಸಿರಿ ಮೊಳಕೆಯಲ್ಲಿ ಎನ್ನುವಂತೆ ಮಕ್ಕಳಲ್ಲಿ ಅಡಗಿರುವ ಪ್ರತಿಭೆಯನ್ನು ಪೋಷಕರು ಗುರುತಿಸಿ ಪ್ರೋತ್ಸಾಹಿಸುವ ಕೆಲಸ ಮಾಡಬೇಕು ಎಂದು ಬುಡಾ ಅಧ್ಯಕ್ಷ ದಮ್ಮೂರು ಶೇಖರ್ ಅವರು ಹೇಳಿದರು.
ನಗರದ ಮಿಲ್ಲರ್ ಪೇಟೆಯ ಕಲ್ಯಾಣಸ್ವಾಮಿ ಮಠದಲ್ಲಿ ಶುಕ್ರವಾರ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಯೋಜಿಸಿದ್ದ ‘ಚಿಗುರು-2020 ಸಾಂಸ್ಕøತಿಕ ಕಾರ್ಯಕ್ರಮ’ವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಚಿಗುರು ಕಾರ್ಯಕ್ರಮದಲ್ಲಿ ಭಾಗವಹಿಸಿದ ಮಕ್ಕಳು ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಪ್ರತಿಭೆಯನ್ನು ತೋರಿ ಜಿಲ್ಲೆಗೆ ಹೆಮ್ಮೆಯನ್ನು ತರಬೇಕು. ಮುಂದಿನ ದಿನಗಳಲ್ಲಿ ಸಹ ಇಂತಹ ಕಾರ್ಯಕ್ರಮಗಳು ಹೆಚ್ಚು ಹೆಚ್ಚಾಗಿ ನಡೆಯಬೇಕು. ಈ ವೇದಿಕೆಯನ್ನು ಮಕ್ಕಳು ಸದುಪಯೋಗ ಪಡೆದುಕೊಂಡು ಒಳ್ಳೆಯ ಕಲಾವಿದರಾಗಬೇಕು ಎಂದರು.
ಕಮ್ಮರಚೇಡು ಸಂಸ್ಥಾನ ಮಠದ ಪೂಜ್ಯ ಶ್ರೀ ಕಲ್ಯಾಣ ಮಹಾಸ್ವಾಮೀಜಿ ಅವರು ಮಾತನಾಡಿ, ಮಕ್ಕಳು ಎಂತಹ ಪ್ರತಿಭೆ ತೋರಿಸಿದರು ಸರ್ಕಾರದಿಂದ ಬರುವ ಗೌರವ ಬೆಲೆ ಕಟ್ಟಲಾಗದು. ಮಕ್ಕಳಲ್ಲಿರುವ ಪ್ರತಿಭೆ ಅರಳಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವೇದಿಕೆ ಕಲ್ಪಿಸುತ್ತಿರುವುದು ಅಭಿನಂದನಾರ್ಹ ಎಂದರು.
ಪತ್ರಕರ್ತ ಕೆ.ಎಂ.ಮಂಜುನಾಥ ಮಾತನಾಡಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಿದ್ದಲಿಂಗೇಶ.ಕೆ ರಂಗಣ್ಣವರ ಸ್ವಾಗತಿಸಿದರು.
ಕಾರ್ಯಕ್ರಮದಲ್ಲಿ ಬಳ್ಳಾರಿಯ ರಾಘವರ್ಷಿಣಿ ಅವರಿಂದ ಕರ್ನಾಟಕ ಸಂಗೀತ, ಜಾನ್ಹವಿ ಅವರಿಂದ ಭರತನಾಟ್ಯ, ಸಂಡೂರು ತಾಲೂಕಿನ ತೋರಣಗಲ್ಲು ಮೌನಿಕ ಅವರಿಂದ ಸುಗಮ ಸಂಗೀತ, ಬಳ್ಳಾರಿ ಅಜಯ್ ಅವರಿಂದ ಏಕ ಪಾತ್ರಾಭಿನಯ, ಷಣ್ಮುಗಂ ಅವರಿಂದ ಜಾನಪದ ಗೀತೆಗಳು, ಧಾರವಾಡ ಜಿಲ್ಲೆಯ ಹಳಿಯಾಳನ ಕೀರ್ತಿ ಕಲಾ ಲೋಕ ಅವರಿಂದ ಮೂಡಲಪಾಯ ಮತ್ತು ಬಳ್ಳಾರಿ ಹೆಚ್.ರಕ್ಷಿತ ಮತ್ತು ತಂಡದಿಂದ ಸಮೂಹ ನೃತ್ಯ ನಡೆದವು.
ಈ ಸಂದರ್ಭದಲ್ಲಿ ಚಿತ್ರಕಲಾವಿದ ಮಂಜುನಾಥ್ ಗೋವಿಂದವಾಡ, ಸಿರಿಸಿಯ ಮೂಡಲಪಾಯ ಕಲಾವಿದ ಹೆಚ್.ಗಣೇಶ್, ಸೂರ್ಯಕಲಾ ಟ್ರಸ್ಟ್ ಅಧ್ಯಕ್ಷ ಅಭಿಷೇಕ್ ಸೇರಿದಂತೆ ಹಲವು ಗಣ್ಯವ್ಯಕ್ತಿಗಳು ಇದ್ದರು