ಬಳ್ಳಾರಿ: ಚಿಹ್ನೆ ಮುದ್ರಣ ದೋಷದಿಂದಾಗಿ ಶಂಕರಬಂಡೆ ಗ್ರಾಪಂ ವ್ಯಾಪ್ತಿಯ ತೊಲಮಾಮಡಿ ಮತಗಟ್ಟೆಯಲ್ಲಿ ಮತದಾನ ಸ್ಥಗಿತವಾಗಿದೆ.
ಸುದ್ದಿ ತಿಳಿಯುತ್ತಲೇ ಸ್ಥಳಕ್ಕೆ ಭೇಟಿ ನೀಡಿದ ಜಿಲ್ಲಾ ಚುನಾವಣಾಧಿಕಾರಿ ಎಸ್.ಎಸ್.ನಕುಲ್ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೈದಲು ಅಡಾವತ್,ಸಹಾಯಕ ಆಯುಕ್ತ ರಮೇಶ ಕೋನರೆಡ್ಡಿ,ತಹಶಿಲ್ದಾರ್ ರೆಹಮಾನ್ ಪಾಶಾ ಅವರು ಪರಿಶೀಲನೆ ನಡೆಸಿದರು.
ಮುದ್ರಣದೋಷದಿಂದಾಗಿ ತೊಲಮಾಮಡಿ ಮತಗಟ್ಟೆಯ ಅಭ್ಯರ್ಥಿ ಪದ್ಮಾವತಿ ಅವರ ಚಿಹ್ನೆ ಮಡಿಕೆಯ ಬದಲಿಗೆ ಸಿಲಿಂಡರ್ ಚಿಹ್ನೆ ಬಂದಿದ್ದು, ಈ ಹಿನ್ನೆಲೆಯಲ್ಲಿ ಸ್ಥಗಿತಗೊಳಿಸಲಾಗಿದ್ದು, ಈ ಕುರಿತು
ಚುನಾವಣಾ ಆಯೋಗಕ್ಕೆ ವರದಿ ಸಲ್ಲಿಸಲಾಗಿದೆ. ಈ ಗ್ರಾಪಂ ವ್ಯಾಪ್ತಿಯ ರಿಟರ್ನಿಂಗ್ ಅಧಿಕಾರಿಗೆ ಶೋಕಾಸ್ ನೋಟಿಸ್ ಜಾರಿ ಮಾಡಲಾಗಿದೆ. ಎರಡನೇ ಹಂತದ ಚುನಾವಣೆಯ ದಿನ ಅಥವಾ ಇನ್ನೊಂದು ದಿನ ಈ ಮತಗಟ್ಟೆಯಲ್ಲಿ ಮತದಾನ ನಡೆಸಲಾಗುವುದು ಎಂದು ಜಿಲ್ಲೆಯ ಎಸ್.ಎಸ್.ನಕುಲ್ ತಿಳಿಸಿದ್ದಾರೆ.