ಜಿಲ್ಲಾ ಉಸ್ತುವಾರಿ ಸಚಿವ ಆನಂದಸಿಂಗ್ ನಾಳೆ ಬಳ್ಳಾರಿಗೆ

ಬಳ್ಳಾರಿ: ಅರಣ್ಯ,ಪರಿಸರ,ಜೀವಿಶಾಸ್ತ್ರ ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾದ ಆನಂದಸಿಂಗ್ ಅವರು ಡಿ.23ರಂದು ಬಳ್ಳಾರಿಗೆ ಆಗಮಿಸಲಿದ್ದಾರೆ.
ಬುಧವಾರ ಬೆಳಗ್ಗೆ 9ಕ್ಕೆ ಹೊಸಪೇಟೆಯಿಂದ ಹೊರಟು ಬೆಳಗ್ಗೆ 10.30ಕ್ಕೆ ಬಳ್ಳಾರಿಗೆ ಆಗಮಿಸಲಿದ್ದು, ಬೆಳಿಗ್ಗೆ 11ಕ್ಕೆ ವಿಜಯನಗರ ವೈದ್ಯಕೀಯ ಮಹಾವಿದ್ಯಾಲಯದ ಪರಿವೀಕ್ಷಣೆ ಮತ್ತು ಪ್ರಗತಿ ಪರಿಶೀಲನೆ ನಡೆಸಲಿದ್ದಾರೆ.
ನಂತರ ಅವರು ರಸ್ತೆ ಮೂಲಕ ಹೊಸಪೇಟೆಗೆ ತೆರಳಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿ ರಮೇಶ್ ಬಾಬು ಎನ್. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ..