ರಾಜ್ಯದಲ್ಲಿ ಇಂದಿನಿಂದ ಒಂಬತ್ತು ದಿನ ರಾತ್ರಿ ಕರ್ಫ್ಯೂ ಜಾರಿ -ಸಿಎಂ ಬಿ ಎಸ್ ವೈ

ಬೆಂಗಳೂರು: ರೂಪಾಂತರಗೊಂಡಿರುವ ಕೊರೋನಾ ಹಿನ್ನಲೆಯಲ್ಲಿ ಬುದವಾರದಿಂದ ಜ. 2ರವೆರೆಗೆ ಒಂಬತ್ತು ದಿನ ರಾಜ್ಯದಲ್ಲಿ ರಾತ್ರಿ ಕರ್ಪ್ಯೂ ಜಾರಿ ಮಾಡಲಾಗುವುದು ಎಂದು ಮುಖ್ಯ‌ಂತ್ರಿ ಬಿ ಎಸ್ ಯಡಿಯೂರಪ್ಪ ಅವರು ತಿಳಿಸಿದರು.
ಇಂದು(ಡಿ. 23) ನಗರದ ಗೃಹ ಕಚೇರಿ ‘ಕೃಷ್ಣಾ’ದಲ್ಲಿ ಕೋವಿಡ್ ಸಾಂಕ್ರಾಮಿಕವನ್ನು‌ ಪರಿಣಾಮಕಾರಿಯಾಗಿ ತಡೆಗಟ್ಟುವ‌ ಸಂಬಂಧ ಸಚಿವರು ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಉನ್ನತ ಮಟ್ಟದ ಸಭೆ ನಡೆಸಿ ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.