ಆರೋಗ್ಯ ಸಿಬ್ಬಂದಿ ಪ್ರಾಣ ಉಳಿಸಿದ ಅಗ್ನಿಶಾಮಕದಳದ ಸಿಬ್ಬಂದಿ

ಕೂಡ್ಲಿಗಿ: ಆರೋಗ್ಯ ಇಲಾಖೆಯ ಸಿಬ್ಬಂದಿಯೊಬ್ಬ ನಿಯಂತ್ರಣ ತಪ್ಪಿ ಕೆಳಗೆ ಬಿದ್ದು ಪರಿಣಾಮವಾಗಿ ತೀವ್ರಗಾಯಗೊಂಡಿದ್ದನ್ನು ಗಮನಿಸಿದ ಸ್ಥಳದಲ್ಲಿದ್ದ ಅಗ್ನಿಶಾಮಕ ಸಿಬ್ಬಂದಿಗಳು
ತಮ್ಮ ವಾಹನದಲ್ಲಿ ಆಸ್ಪತ್ರೆಗೆ ಕರೆತಂದು ಜೀವ ಉಳಿಸಿ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾದ ಘಟನೆ ಕೂಡ್ಲಿಗಿ ಪಟ್ಟಣದಲ್ಲಿ ನಡೆದಿದೆ.
ಪಟ್ಟಣದ ಕಡೆಗೆ ಬರುತ್ತಿದ್ದ ತಿಮಲಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿ ಜಗದೀಶನಾಯ್ಕ್ ಅವರೇ ಬೈಕಿನಿಂದ ಬಿದ್ದು ತೀವ್ರವಾಗಿ ಗಾಯಗೊಂಡು ನರಳು ತ್ತಿದ್ದರು.
ರೋಡ್ ಅಮ್ಸ್ ಕಾಣದೆ ಬೈಕ್ ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದು ಕಣ್ಣು ತಲೆ ಕೈ ಕಾಲಿಗೆ ತೀವ್ರ ರಕ್ತಗಾಯಗಳಾದವು. ತಕ್ಷಣ ಅಲ್ಲೇ ಇದ್ದ ಅಗ್ನಿ ಶಾಮಕ ಠಾಣಾ ಸಿಬ್ಬಂದಿಗಳು 108 ಅಂಬ್ಯುಲೆನ್ಸ್ ಗೆ ಕರೆ ಮಾಡಿದರು. ವಾಹನ ಬೇರೆ ಕಡೆ ಕರ್ತವ್ಯದಲ್ಲಿದ್ದರಿಂದ ತಕ್ಷಣ ಅಗ್ನಿಶಾಮಕ ಸಿಬ್ಬಂದಿಗಳು ತಮ್ಮ ವಾಹನದಲ್ಲಿ ಕೂಡ್ಲಿಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಚಿಕಿತ್ಸೆ ಕೊಡಿಸಿದರು. ಆರೋಗ್ಯ ಇಲಾಖೆ ಸಿಬ್ಬಂದಿಗಳು ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ಕಳುಹಿಸಿದ್ದಾರೆ.
ಸಮಯಪ್ರಜ್ಞೆ, ಮಾನವೀಯತೆ ಮೆರೆದ ಅಗ್ನಿಶಾಮಕದಳದ ಸಿಬ್ಬಂದಿಯ ಕಾರ್ಯವನ್ನು ಪಟ್ಟಣದ ಜನತೆ ಮುಕ್ತ ಕಂಠದಿಂದ ಪ್ರಶಂಸಿಸುತ್ತಿದ್ದಾರೆ