ಬಳ್ಳಾರಿ: ಜಿಲ್ಲೆಯಲ್ಲಿ ಡಿ.22 ಮತ್ತು 27ರಂದು ಎರಡು ಹಂತಗಳಲ್ಲಿ ನಡೆದ ಗ್ರಾಮ ಪಂಚಾಯ್ತಿ ಚುನಾವಣೆಯ ಮತ ಎಣಿಕೆ ನಗರದ ಕೋಟೆ ಪ್ರದೆಶದಲ್ಲಿರುವ ಸಂತ ಜಾನ್ ಶಾಲೆಯಲ್ಲಿ ಬೆಳಿಗ್ಗೆ 8ಗಂಟೆಗೆ ಆರಂಭವಾಗಿದೆ.
ಹಿರಿಯ ಅಧಿಕಾರಿಗಳ ಸಮ್ಮುಖದಲ್ಲಿ ಮತ ಪೆಟ್ಟಿಗೆಗಳನ್ನು ಸಂಗ್ರಹಿಸಿರುವ ಭದ್ರತಾ ಕೊಠಡಿಗಳನ್ನು ತೆರೆಯಲಾಯಿತು.
ಜಿಲ್ಲಾಧಿಕಾರಿ ಎಸ್ ಎಸ್ ನಕುಲ್, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಸೈದುಲು ಅಡಾವತ್, ಜಿಪಂ ಸಿಇಓ ನಂದಿನಿ ಮತ ಎಣಿಕೆ ಕಾರ್ಯವನ್ನು ಪರಿಶೀಲಿಸಿದರು.