ಚಮಕೇರಿ ಮಡ್ಡಿ ಗ್ರಾಮದ ಏತ ನೀರಾವರಿ ಕಾಮಗಾರಿಗೆ ಉಪ ಮುಖ್ಯಮಂತ್ರಿ ಸವದಿ ಅವರಿಂದ ಭೂಮಿಪೂಜೆ

ಬೆಳಗಾವಿ: ಸಾರಿಗೆ ಖಾತೆ ಹೊಂದಿರುವ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರು ಶುಕ್ರವಾರ ಅಥಣಿ ತಾಲೂಕಿನ ಚಮಕೇರಿ ಮಡ್ಡಿ ಗ್ರಾಮದಲ್ಲಿ ಹಲವು ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ನೀಡಿದರು.
ಗ್ರಾಮದ ಶ್ರೀ ಶಿವಯೋಗಿ ಸಿದ್ದರಾಮೇಶ್ವರ ರೈತರ ಸಂಘದ ಜಮೀನುಗಳಿಗೆ ಕೃಷ್ಣಾ ನದಿಯಿಂದ ಏತ ನೀರಾವರಿ ಯೋಜನೆ ಮೂಲಕ ನೀರು ಒದಗಿಸುವ ಕಾಮಗಾರಿಗೆ ಭೂಮಿ ಪೂಜೆಯನ್ನು ನೆರವೇರಿಸಿದರು. ಈ ಸಂಧರ್ಭದಲ್ಲಿ ಹೊಳಲ್ಕೆರೆ ಶಾಸಕರು ಆಗಿರುವ ಕೆ.ಎಸ್.ಆರ್.ಟಿ.ಸಿ ನಿಗಮದ ಅಧ್ಯಕ್ಷ ಚಂದ್ರಪ್ಪ ಹಾಗೂ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.