ಬಳ್ಳಾರಿ: ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರ(ಬುಡಾ)ದ ಅಧ್ಯಕ್ಷರಾಗಿ ದಮ್ಮೂರು ಶೇಖರ್ ಅವರು ಮರು ನೇಮಕಗೊಂಡಿದ್ದಾರೆ.
ಎರಡು ದಿನಗಳ ಹಿಂದೆಯಷ್ಟೇ ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಕೆ ಎ ರಾಮಲಿಂಗಪ್ಪ ಅವರು ಬುಡಾ ಅಧ್ಯಕ್ಷರಾಗಿ ನೇಮಕಗೊಂಡಿದ್ದರು ಮಾತ್ರವಲ್ಲ ತಕ್ಷಣ ಅಧಿಕಾರ ಸ್ವೀಕಾರ ಪ್ರಕ್ರಿಯೆಯನ್ನು ಪೂರೈಸಿದ್ದರು.
ನಲವತ್ತೆಂಟು ಗಂಟೆಗಳಲ್ಲಿ ಶೇಖರ್ ಅವರೇ ಬುಡಾ ಅಧ್ಯಕ್ಷರಾಗಿ ನೇಮಕಗೊಂಡಿದ್ದಾರೆ.
ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರೇ ಮರು ನೇಮಕವಾಗಲು ಪ್ರಭಾವ ಬೀರಿದ್ದಾರೆ. ಕೆ ಎ ರಾಮಲಿಂಗಪ್ಪ ಅವರನ್ನು ವಾಡಾ(ವಿಜಯನಗರ ಪ್ರದೇಶಾಭಿವೃದ್ಧಿ ಪ್ರಾಧಿಕಾರ)ದ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.