ಅಸ್ಪೃಶ್ಯತೆ ನಿವಾರಣೆ ಜಾಗೃತಿ ಕಲಾಜಾಥಕ್ಕೆ ಡಿಸಿ ಮಾಲಪಾಟಿ ಚಾಲನೆ

ಬಳ್ಳಾರಿ: ಅಸ್ಪೃಶ್ಯತೆ ನಿವಾರಣೆಗೆ ಸಂಬಂಧಿಸಿದಂತೆ ಜಾಗೃತಿ ಮೂಡಿಸುವ ಕಲಾಜಾಥಾಗೆ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಜಿಲ್ಲಾಧಿಕಾರಿ ಪವನಕುಮಾರ್ ಮಾಲಪಾಟಿ ಅವರು ಸೋಮವಾರ ಚಾಲನೆ ನೀಡಿದರು.
ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ರಾಜಪ್ಪ,ತಹಸೀಲ್ದಾರ್ ರೆಹಮಾನ್ ಪಾಶಾ, ಸಮಾಜಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಗಂಗಣ್ಣ, ಇಲಾಖೆಯ ವಿಜಯಲಕ್ಷ್ಮಿ, ವೇದಾವತಿ, ಚಿಗುರು ಕಲಾ ತಂಡದ ಕಲಾವಿದರು ಇದ್ದರು.
ಒಂದು ವಾರಗಳ ಕಾಲ ಜಿಲ್ಲೆಯ ವಿವಿಧೆಡೆ ಸಂಚರಿಸಿ ಅಸ್ಪೃಶ್ಯತೆ ನಿವಾರಣೆ ಕುರಿತು ಅರಿವು ಮೂಡಿಸಲಿದೆ
****