ಬಳ್ಳಾರಿ: 2005 ರ ನೇಮಕಾತಿ ಅಧಿಸೂಚನೆ ಅನ್ವಯ 2007 ಜನವರಿಯಲ್ಲಿ ನೇಮಕಾತಿಗೊಂಡಿರುವ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಹಳೆ ಪಿಂಚಣಿ ಸೌಲಭ್ಯ ಕಲ್ಪಿಸುವಂತೆ ಕರಾಸಪ್ರಾಶಾ ಶಿಕ್ಷಕರ ಸಂಘ ಡಿಡಿಪಿಐ ಅವರನ್ನು ಒತ್ತಾಯಿಸಿದೆ.
ಈ ಕುರಿತು ಕರಾಸಪ್ರಾಶಾ ಶಿಕ್ಷಕರ ಸಂಘದ ಅವಿಭಜಿತ ಬಳ್ಳಾರಿ ಜಿಲ್ಲಾಧ್ಯಕ್ಷ ಸಿ.ನಿಂಗಪ್ಪ ಅವರ ನೇತೃತ್ವದಲ್ಲಿ ಶಿಕ್ಷಕರು ಶನಿವಾರ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಸಿ.ರಾಮಪ್ಪ ಅವರಿಗೆ ಮನವಿ ಪತ್ರ ಸಲ್ಲಿಸಿ ತಮ್ಮ ಬೇಡಿಕೆ ನ್ಯಾಯಯುತವಾಗಿದ್ದು ಕೂಡಲೇ ಈಡೇರಿಸಬೇಕು ಎಂದು ಒತ್ತಾಯಿಸಿದರು.
2005 ರ ನೇಮಕಾತಿ ಅಧಿಸೂಚನೆ ಅನ್ವಯ 2007 ಜನವರಿಯಲ್ಲಿ ನೇಮಕಾತಿಗೊಂಡಿರುವ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಹಳೆ ಪಿಂಚಣಿ ಸೌಲಭ್ಯ ಕಲ್ಪಿಸುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರನ್ನು ಕೋರಿದರು.
ಈ ಸಂದರ್ಭದಲ್ಲಿ ಕರಾಸಪ್ರಾಶಾ ಶಿಕ್ಷಕರ ಸಂಘ ಬಳ್ಳಾರಿ ಜಿಲ್ಲಾ ಘಟಕದ ಪದಾಧಿಕಾರಿಗಳು, ಕರಾಸನೌ ಸಂಘದ ಸದಸ್ಯ ಬಿ. ರಾಘವೇಂದ್ರ ಮತ್ತಿತರರು ಉಪಸ್ಥಿತರಿದ್ದರು.
*****