ಬೆಂಗಳೂರು: ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಆಯೋಜಿಸಿದ್ದ ರಾಜ್ಯಮಟ್ಟದ ಕಾಯಕ ಶರಣರ ಜಯಂತಿ ಕಾರ್ಯಕ್ರಮವನ್ನು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರು ಶುಕ್ರವಾರ ಉದ್ಘಾಟಿಸಿದರು.
ಚಿತ್ರದುರ್ಗದ ಶ್ರೀ ಮಹಾ ಶಿವಶರಣ ಹರಳಯ್ಯ ಗುರುಪೀಠದ ಶ್ರೀ ಬಸವಹರಳಯ್ಯ ಸ್ವಾಮೀಜಿ, ಶ್ರೀ ಡೋಹರ ಕಕ್ಕಯ್ಯ ಗುರುಪೀಠ ಹಾಗೂ ದಾರವಾಡದ ಶ್ರೀ ಗುರುದೇವಾ ತಪೋವನ ಬೀರುವಳ್ಳಿಯ ಶ್ರೀ ಗುರುಮಾತಾ ನಂದಾತಾಯಿ ಸಾನಿಧ್ಯ ವಹಿಸಿದ್ದರು.
ಈ ಸಂದರ್ಭದಲ್ಲಿ ಸಂಸದ ಎಲ್. ಹನುಮಂತಯ್ಯ, ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಳ್ಳಾರಿಯ ಎಚ್ ಹನುಮಂತಪ್ಪ , ಕರ್ನಾಟಕದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಆಯೋಗದ ಸದಸ್ಯ ಎಚ್ ವೆಂಕಟೇಶ್ ದೊಡ್ಡೇರಿ, ಶಾಸಕ ಆರ್. ಧರ್ಮಸೇನ, ಬೆಂಗಳೂರು ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಜಿ ಮರಿಸ್ವಾಮಿ,ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕ ಎಸ್ ರಂಗಪ್ಪ ಹಾಗೂ ಇತರ ಗಣ್ಯರು ಭಾಗವಹಿಸಿದ್ದರು.
*****