ಬಳ್ಳಾರಿ: ಜಿಲ್ಲಾಧಿಕಾರಿ ಪವನಕುಮಾರ್ ಮಾಲಪಾಟಿ ಅವರು ಸಿರಗುಪ್ಪ ತಾಲೂಕಿನ ಕರೂರು ಹೋಬಳಿಯ ಉತ್ತನೂರು ಗ್ರಾಮದಲ್ಲಿ ಮಾ.20ರಂದು ಶನಿವಾರ ಗ್ರಾಮವಾಸ್ತವ್ಯ ಕಾರ್ಯಕ್ರಮದಲ್ಲಿ ಭಾಗವಹಿಸಿ ಗ್ರಾಮಸ್ಥರ ದೂರು-ದುಮ್ಮಾನ ಆಲಿಸಲಿದ್ದಾರೆ.
ಈ ಹಿನ್ನಲೆಯಲ್ಲಿ ಸಿದ್ಧತೆಗಳು ಭರದಿಂದ ಸಾಗಿದ್ದು, ಜಿಲ್ಲಾಧಿಕಾರಿಗಳಿಗೆ ವಿವಿಧ ಇಲಾಖೆಗಳ ಅಧಿಕಾರಿಗಳು ಸಾಥ್ ನೀಡಲಿದ್ದಾರೆ.
ಡಿಸಿಅವರು ಸ್ಥಳದಲ್ಲಿಯೇ ಅನೇಕ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಲಿದ್ದಾರೆ ಮತ್ತು ಉಳಿದ ಸಮಸ್ಯೆಗಳಿಗೆ ಕಾಲಮಿತಿಯಲ್ಲಿ ಪರಿಹರಿಸಲು ಅಧಿಕಾರಿಗಳಿಗೆ ನಿರ್ದೇಶನ ನೀಡಲಿದ್ದಾರೆ.
ಗ್ರಾಮಸ್ಥರು ತಮ್ಮ ದೂರು-ದುಮ್ಮಾನ ಹಾಗೂ ಸಮಸ್ಯೆಗಳನ್ನು ಜಿಲ್ಲಾಧಿಕಾರಿಗಳಿಗೆ ಹೇಳಿಕೊಳ್ಳಲು ಈ ಮೂಲಕ ತಮ್ಮ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಲು ಉತ್ಸುಕರಾಗಿದ್ದಾರೆ.
ಜಿಲ್ಲಾಧಿಕಾರಿಗಳು ಉತ್ತನೂರು ಗ್ರಾಮದಲ್ಲಿ ಗ್ರಾಮವಾಸ್ತವ್ಯ ನಡೆಸಲಿದ್ದರೆ, ತಾಲೂಕುಮಟ್ಟದಲ್ಲಿ ತಹಸೀಲ್ದಾರರು ಸಹ ಒಂದೊಂದು ಊರುಗಳನ್ನು ಗುರುತಿಸಿ ಆ ಗ್ರಾಮಗಳಲ್ಲಿ ಗ್ರಾಮವಾಸ್ತವ್ಯ ನಡೆಸುವ ಮೂಲಕ ಜನರ ಸಮಸ್ಯೆಗಳಿಗೆ ದನಿಯಾಗುವ ಕೆಲಸ ಮಾಡಲಿದ್ದಾರೆ. ಈ ಗ್ರಾಮವಾಸ್ತವ್ಯದ ಮೂಲಕ ಜನರ ಮನೆಬಾಗಿಲಿಗೆ ಸರಕಾರ ತೆರಳಿದಂತಾಗಲಿದೆ.
*****