ವಿಜಯನಗ(ಹೊಸಪೇಟೆ): ಬಳ್ಳಾರಿ ವೃತ್ತದ ಅರಣ್ಯಾಧಿಕಾರಿಗಳ ಸಭೆಯನ್ನು ಜಿಲ್ಲೆಯ ಕಮಲಾಪುರದ ಪ್ರಕೃತಿ ವಿಶ್ಲೇಷಣಾ ಕೇಂದ್ರದಲ್ಲಿ ಗುರುವಾರ ಆಯೋಜಿಸಲಾಗಿತ್ತು.
ಸಭೆಯ ಅದ್ಯಕ್ಷತೆಯನ್ನು ಅರಣ್ಯ,ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ ಅವರು ವಹಿಸಿದ್ದರು.
ಜಿಲ್ಲೆಯ ಅರಣ್ಯ ಭವನಕ್ಕೆ ಭೇಟಿ ನೀಡಿದ ಸಚಿವರು ಅರಣ್ಯ ಇಲಾಖೆಯ ಕಾರ್ಯಕ್ರಮಗಳು ಮತ್ತು ಮಾಹಿತಿ ಕುರಿತಂತೆ ಪ್ರದರ್ಶಿಸಿರುವ ಪ್ರಾತ್ಯಕ್ಷಿಕೆಗಳನ್ನು ಮತ್ತು ಭಿತ್ತಿಚಿತ್ರಗಳನ್ನು ವೀಕ್ಷಿಸಿದರು. ಜಿಲ್ಲೆಯಲ್ಲಿ ಇಲಾಖೆವತಿಯಿಂದ ಅನುಷ್ಠಾನಗೊಳ್ಳುತ್ತಿರುವ ಕಾರ್ಯಕ್ರಮಗಳ ಮಾಹಿತಿ ಪಡೆದರು.
ಬಳ್ಳಾರಿ ವೃತ್ತದ ಅರಣ್ಯಾಧಿಕಾರಿಗಳ ಸಭೆಯ ಬಳಿಕ ಲಿಂಬಾವಳಿ ಅವರು ದರೋಜಿ ಕರಡಿ ಧಾಮಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
*****