ಉಚಿತ ಅಂಬುಲೆನ್ಸ್ ‘ಮೈ ಸೇವೆ’ಗೆ ಶಾಸಕ ಸೋಮಶೇಖರ ರೆಡ್ಡಿ ಚಾಲನೆ

ಬಳ್ಳಾರಿ: ಕೋವಿಡ್‌ -19 ಸಂಕಷ್ಟದ ಈ ಸಂದರ್ಭದಲ್ಲಿ ಜನತೆಯ ಉಪಯೋಗಕ್ಕಾಗಿ ಉಚಿತ ಅಂಬುಲೆನ್ಸ್ ಸೇವೆಗೆ ನಗರ ಶಾಸಕ ಜಿ.ಸೋಮಶೇಖರ ರೆಡ್ಡಿ ಅವರು
ಚಾಲನೆ ನೀಡಿದರು.
ನಗರದ ಬಿಜೆಪಿ ಕಚೇರಿ ಆವರಣದಲ್ಲಿ ಜರುಗಿದ ಸರಳ ಸಮಾರಂಭದಲ್ಲಿ ಶಾಸಕರು ಅಂಬುಲೆನ್ಸ್ ವಾಹನಕ್ಕೆ ಹಸಿರು ನಿಶಾನೆ ತೋರಿಸುವುದರ ಮೂಲಕ ಸೇವೆಗೆ ಹಾರೈಸಿದರು.
ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಗುರು ಲಿಂಗನಗೌಡ, ರಾಜ್ಯ ಸಫಾಯಿ ಕರ್ಮಚಾರಿ ನಿಗಮದ ಅಧ್ಯಕ್ಷ ಹೆಚ್. ಹನುಮಂತಪ್ಪ, ಕೆಎಂಎಫ್ ನಿರ್ದೇಶಕ ವೀರಶೇಖರ್ ರೆಡ್ಡಿ, ಬಳ್ಳಾರಿ ನಗರ ಅಧ್ಯಕ್ಷ ಕೆಬಿ.ವೆಂಕಟೇಶ್ವರ, ನಗರ ಪ್ರಧಾನ ಕಾರ್ಯದರ್ಶಿ ರಾಮಾಂಜಿನಿ, ಮಾಜಿ ಕಾರ್ಪೊರೇಟರ್ ಕಿಟ್ಟಿ, ಯುವ ಮೋರ್ಚಾ ಅಧ್ಯಕ್ಷ ಅರುಣ್ ಬಾಲಚಂದ್ರ, ಮೀಡಿಯಾ ಸಂಚಾಲಕರಾದ ರಾಜೀವ್, ಕೃಷ್ಣಾರೆಡ್ಡಿ, ಜೀವನ್ ಕೃಷ್ಣಾ ಮೋಹನ್, ಕುಮಾರಸ್ವಾಮಿ ಹಾಗೂ ಪಕ್ಷದ ಹಿರಿಯರು, ಮುಖಂಡರು ಉಪಸ್ಥಿತರಿದ್ದರು.
ಬಿಜೆಪಿ ರಾಜ್ಯ ಉಪಾಧ್ಯಕ್ಷ ವಿಜಯೇಂದ್ರ ಯಡಿಯೂರಪ್ಪ MY ಸೇವೆ ತಂಡ ಉಚಿತ ಆಂಬುಲೆನ್ಸ್ ಸೇವೆ ಒದಗಿಸುತ್ತದೆ. ಹೆಚ್ಚಿನ ಮಾಹಿತಿ ಹಾಗೂ ಉಚಿತ ಅಂಬುಲೆನ್ಸ್ MY ಸೇವೆ ಗಾಗಿ ಓಂ ಪ್ರಕಾಶ್ ಅವರ 9060382926 ಮೊಬೈಲ್ ಸಂಖ್ಯೆಯನ್ನು ಸಂಪರ್ಕಿಸ ಬಹುದು.
*****