ತೋರಣಗಲ್ಲು: ಜಿಂದಾಲ್ ಸಮೀಪದ ಕೋವಿಡ್ ಕೇರ್ ಫೀಲ್ಡ್ ಆಸ್ಪತ್ರೆಗೆ ಸಚಿವ ಆನಂದಸಿಂಗ್ ಭೇಟಿ, ಪರಿಶೀಲನೆ

ಬಳ್ಳಾರಿ, ಮೇ 29: ಜಿಂದಾಲ್ ಕಾರಖಾನೆಯ ಎದುರುಗಡೆಯ ವಿಶಾಲ ಮೈದಾನದಲ್ಲಿ ಸ್ಥಾಪಿಸಲಾಗಿರುವ 1ಸಾವಿರ ಆಕ್ಸಿಜನ್ ಹಾಸಿಗೆಗಳ ಕೋವಿಡ್ ಕೇರ್ ಫೀಲ್ಡ್ ಆಸ್ಪತ್ರೆಗೆ ಮೂಲಸೌಕರ್ಯ ಅಭಿವೃದ್ಧಿ, ಹಜ್ ಮತ್ತು ವಕ್ಫ್ ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಆನಂದಸಿಂಗ್ ಅವರು ಶನಿವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಆಸ್ಪತ್ರೆಯಲ್ಲಿ ದಾಖಲಾಗಿರುವ ಸೊಂಕಿತರೊಂದಿಗೆ ಸಂವಾದ ನಡೆಸಿ,ವ ಚಿಕಿತ್ಸೆ ಹೇಗೆ ನೀಡಲಾಗುತ್ತಿದೆ..?,ಔಷಧಿ ಸರಿಯಾಗಿ ಕೊಡುತ್ತಿದ್ದಾರೆಯೇ..?,ವೈದ್ಯರು ಹಾಗೂ ವೈದ್ಯಕೀಯ ಸಿಬ್ಬಂದಿ ನಿಗದಿತ ಸಮಯಕ್ಕೆ ಬಂದು ತಪಾಸಣೆ ಮಾಡುತ್ತಿದ್ದಾರೆಯೇ..?,ಊಟ ಹೇಗಿದೆ ಎಂದು ಮಾಹಿತಿ ಪಡೆದರು.
ಆಸ್ಪತ್ರೆಯ ಹೊರಗಡೆ ಕುಳಿತಿದ್ದ ಸೊಂಕಿತರ ಸಂಬಂಧಿಕರೊಂದಿಗೂ ಮಾತನಾಡಿದರು.
ಬಳಿಕ ಸಚಿವರು ಆಸ್ಪತ್ರೆಯ ನೋಡಲ್ ಅಧಿಕಾರಿಗಳಾದ ಸಿದ್ರಾಮಪ್ಪ ಚಳಕಾಪುರೆ, ಡಾ.ದೇವಾನಂದ,ಡಾ.ಮರಿರಾಜ್ ಹೂಗಾರ ಸೇರಿದಂತೆ ವೈದ್ಯರು ಹಾಗೂ ವೈದ್ಯಕೀಯ ಸಿಬ್ಬಂದಿಗಳೊಂದಿಗೆ ಸಭೆ ನಡೆಸಿ ಚರ್ಚಿಸಿದರು.
*****