ಬಳ್ಳಾರಿ, ಜೂ.05:ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳಾದ್ಯಂತ ಜಿಲ್ಲಾಡಳಿತ ಈಗಾಗಲೇ ವಿಧಿಸಲಾಗಿರುವ ನಿರ್ಬಂಧಗಳನ್ನು ಸಾರ್ವಜನಿಕರ ಸುರಕ್ಷತಾ ಮತ್ತು ಆರೋಗ್ಯದ ಹಿತದೃಷ್ಟಿಯಿಂದ ಜೂ.14ರವರೆಗೆ ಮುಂದುವರಿಸಿ ಜಿಲ್ಲಾದಂಡಾಧಿಕಾರಿಗಳಾದ ಜಿಲ್ಲಾಧಿಕಾರಿ ಪವನಕುಮಾರ ಮಾಲಪಾಟಿ ಅವರು ಆದೇಶ ಹೊರಡಿಸಿದ್ದಾರೆ.
ಜೂ.7ರ ಬೆಳಗ್ಗೆ 6ರಿಂದ ಜೂ.14ರ ಬೆಳಗ್ಗೆ 6 ಗಂಟೆಯವರೆಗೆ ಯಥಾಸ್ಥಿತಿಯಾಗಿ ಮುಂದುವರಿಸಲಾಗಿದೆ.ಸಾರ್ವಜನಿಕರಿಗೆ ಅಗತ್ಯ ವಸ್ತುಗಳನ್ನು ಖರೀದಿಸಲು ಅವಕಾಶ ನೀಡುವ ಹಿನ್ನೆಲೆಯಲ್ಲಿ ಜೂ.7ಮತ್ತು 08ರಂದು ಬೆಳಗ್ಗೆ 6ರಿಂದ ಮಧ್ಯಾಹ್ನ 12ರವರೆಗೆ (ಕಂಟೈನ್‌ಮೆಂಟ್ ಪ್ರದೇಶದ ಹೊರಗಡೆ ಮಾತ್ರ)ಅವಕಾಶ ನೀಡಲಾಗಿದೆ. ಹಾಗೂ ಸಾರ್ವಜನಿಕರು ಪಡಿತರವನ್ನು ನ್ಯಾಯಬೆಲೆ ಅಂಗಡಿಗಳ ಮೂಲಕ ನೇರವಾಗಿ ಪಡೆದುಕೊಳ್ಳಬಹುದಾಗಿರುತ್ತದೆ ಎಂದು ಅವರು ತಿಳಿಸಿದ್ದಾರೆ.
ರಾಷ್ಟ್ರೀಕೃತ ಹಾಗೂ ಖಾಸಗಿ ಬ್ಯಾಂಕ್ ಗಳು ಸೇರಿದಂತೆ Microfinance,Institutions, Insurance Offices, Co-operative Banks ಗಳಿಗೆ ಜೂ.07ರಿಂದ ಜೂ.11ರವರೆಗೆ ಪ್ರತಿದಿನ ಬೆಳಗ್ಗೆ10 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಮಾತ್ರ ಕಾರ್ಯನಿರ್ವಹಿಸಲು ಅನುಮತಿಸಲಾಗಿದೆ ಎಂದಿದ್ದಾರೆ.
ಸಾರ್ವಜನಿಕರಿಗೆ ನಗದು ಲಭ್ಯವಾಗುವಂತೆ ನೋಡಿಕೊಳ್ಳಲು ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳಾದ್ಯಂತ ಎಲ್ಲಾ ಎಟಿಎಂಗಳನ್ನು 24/7 ಮುಕ್ತವಾಗಿರಿಸಲು ಬ್ಯಾಂಕುಗಳಿಗೆ ಸೂಚಿಸಲಾಗಿದೆ ಹಾಗೂ ಎಟಿಎಂಗಳಲ್ಲಿ ಸಾರ್ವಜನಿಕರಿಗೆ ಅನಕೂಲವಾಗುವಂತೆ Regular Cash Loading ಮಾಡಲು ಸೂಚಿಸಲಾಗಿದೆ ಎಂದು ಅವರು ತಮ್ಮ ಆದೇಶದಲ್ಲಿ ವಿವರಿಸಿದ್ದಾರೆ.