ದಾವಣಗೆರೆ: ನಗರಾಭಿವೃದ್ಧಿ ಹಾಗೂ ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವ ಬಿ.ಎ.ಬಸವರಾಜ ಅವರು ಮಂಗಳವಾರ ಬೆಳಿಗ್ಗೆ ನಗರ ಪ್ರದೇಶಗಳಲ್ಲಿ ಸಂಚರಿಸಿ ದಾವಣಗೆರೆ ಮಹಾನಗರ ಪಾಲಿಕೆ, ದಾವಣಗೆರೆ ಸ್ಮಾರ್ಟ್ ಸಿಟಿ ಲಿಮಿಟೆಡ್ ವತಿಯಿಂದ ನಗರದಲ್ಲಿ ನಡೆದಿರುವ ಕಾಮಗಾರಿಗಳ ಪ್ರಗತಿ ವೀಕ್ಷಣೆ ನಡೆಸಿದರು.
ನಗರದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್ ನಿಲ್ದಾಣ, ಖಾಸಗಿ ಬಸ್ ನಿಲ್ದಾಣ ಮತ್ತು ಕುಂದವಾಡ ಕೆರೆ ಬಳಿ ನಿರ್ಮಾಣವಾಗುತ್ತಿರುವ ವಿದ್ಯುತ್ ಚಿತಾಗಾರ ಕಾಮಗಾರಿಗಳ ಪ್ರಗತಿ ಪರಿಶೀಲಿಸಿದರು.
ದಾವಣಗೆರೆ ಸಂಸದರಾದ ಜಿ.ಎಮ್. ಸಿದ್ದೇಶ್ವರ, ಜಿಲ್ಲಾಧಿಕಾರಿ ಮಹಾಂತೇಶ್ ಬಿಳಗಿ, ದಾವಣಗೆರೆ ನಗರಾಭಿವೃದ್ಧಿ ಪ್ರಾಣಿ ಅಧ್ಯಕ್ಷ ರಾಜನಹಳ್ಳಿ ಶಿವಕುಮಾರ್, ದಾವಣಗೆರೆ ಮೇಯರ್, ಸದಸ್ಯರು, ಪಾಲಿಕೆ ಆಯುಕ್ತರು, ಸ್ಮಾರ್ಟ್ ಸಿಟಿ ಎಂ.ಡಿ ಸೇರಿದಂತೆ ಹಲ ಅಧಿಕಾರಿ ವರ್ಗದವರು ಉಪಸ್ಥಿತರಿದ್ದರು.
ಸಭೆಯಲ್ಲಿ ಭಾಗಿ: ಬಳಿಕ ಸಚಿವರು ದಾವಣಗೆರೆ ಸ್ಮಾರ್ಟ್ ಸಿಟಿ ಲಿಮಿಟೆಡ್ ಆಯೋಜಿಸಿದ್ದ ನಗರ ಮಟ್ಟದ ಸಲಹಾ ಸಮಿತಿ ಸಭೆಯಲ್ಲಿ ಪಾಲ್ಗೊಂಡಿದ್ದರು.
2021-22 ನೇ ಸಾಲಿನ 1ನೇ ತ್ರೈಮಾಸಿಕ ಹಾಗೂ 8ನೇ ಸಿಟಿ ಲೆವೆಲ್ ಅಡ್ವೈಸರಿ ಫೋರಂ ಸಭೆಯಲ್ಲಿ ಸಂಸದ ಜಿ.ಎಂ.ಸಿದ್ದೇಶ್ವರ, ಶಾಸಕ ಶಾಮನೂರು ಶಿವಶಂಕರಪ್ಪ, ಎಸ್.ಎ.ರವೀಂದ್ರನಾಥ, ಪ್ರೊ ಎಸ್ ಲಿಂಗಣ್ಣ, ಜಿಲ್ಲಾಧಿಕಾರಿ ಮಹಾಂತೇಶ್ ಬಿಳಗಿ, ಪೋಲೀಸ್ ವರಿಷ್ಟಾಧಿಕಾರಿ ಸಿ ಬಿ ರಿಷ್ಯಂತ್, ಮೇಯರ್ ಎಸ್. ಟಿ. ವೀರೇಶ್, ದಾವಣಗೆರೆ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರಾಜನಹಳ್ಳಿ ಶಿವಕುಮಾರ್, ಸ್ಮಾರ್ಟ್ ಸಿಟಿ ಎಮ್ ಡಿ ರವೀಂದ್ರ ಮಲ್ಲಾಪುರ ಸೇರಿದಂತೆ ಹಲವು ಜನಪ್ರತಿನಿಧಿಗಳು ಮತ್ತು ಅಧಿಕಾರಿ ವರ್ಗದವರು ಉಪಸ್ಥಿತರಿದ್ದರು.
*****