ಬಳ್ಳಾರಿ,ಜು.02: 2021-22ನೇ ಸಾಲಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬೀಮಾ ಯೋಜನೆಯ ಮುಂಗಾರು ಹಂಗಾಮಿನ ಬೆಳೆ ವಿಮೆ ಪ್ರಚಾರ ವಾಹನಕ್ಕೆ ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಶರಣಪ್ಪ ಮುದಗಲ್ ಅವರು ಕೃಷಿ ಇಲಾಖೆಯ ಕಚೇರಿ ಆವರಣದಲ್ಲಿ ಶುಕ್ರವಾರ ಚಾಲನೆ ನೀಡಿದರು.
ಬೆಳೆ ವಿಮೆ ನೊಂದಾಯಿಸಲು, ಬೆಳೆ ಸಾಲ ಪಡೆದ ಹಾಗೂ ಬೆಳೆ ಸಾಲ ಪಡೆಯದ ರೈತರು ತಮ್ಮ ಬೆಳೆಗಳಿಗೆ ಬ್ಯಾಂಕುಗಳಲ್ಲಿ ವಿಮೆ ಮಾಡಿಸಲು ಪ್ಯೂಚರ್ ಜನರಲಿ ಇನ್ಸುರೆನ್ಸ್ ಕಂಪನಿಯ ಪ್ರಚಾರ ವಾಹನಕ್ಕೆ ಚಾಲನೆ ನೀಡಲಾಯಿತು.
ಈ ಸಂದರ್ಭದಲ್ಲಿ ಕೃಷಿ ಇಲಾಖೆಯ ಅಧಿಕಾರಿಗಳು, ರೈತರು ಹಾಗೂ ಪ್ಯೂಚರ್ ಜನರಲಿ ಇನ್ಸುರೆನ್ಸ್ ಕಂಪನಿಯ ಪ್ರತಿನಿಧಿಗಳು ಮತ್ತಿತರರು ಇದ್ದರು.
*****