ಬಳ್ಳಾರಿ, ಜು.14: ಬಳ್ಳಾರಿ ಗ್ರಾಮೀಣ ಶಾಸಕ ಬಿ.ನಾಗೇಂದ್ರ ಅವರು ಬುಧವಾರ ತಾಲೂಕಿನ ಬೊಬ್ಬುಕುಂಟೆ, ಕಮ್ಮೆಚೇಡು ಗ್ರಾಮಗಳಿಗೆ ಭೇಟಿ ನೀಡಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲಿಸಿದರು.
ಬೊಬ್ಬುಕುಂಟೆ ಗ್ರಾಮದಲ್ಲಿ ನಿರ್ಮಾಣವಾಗುತ್ತಿರುವ ನೂತನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಕಟ್ಟಡ ನಿರ್ಮಾಣ ಕಾಮಗಾರಿಯನ್ನು ವೀಕ್ಷಿಸಿದ ಶಾಸಕರು
ಕಾಮಗಾರಿಯಲ್ಲಿ ಗುಣಮಟ್ಟ ಕಾಯ್ದುಕೊಳ್ಳುವಂತೆ ಅವರು ಸಂಬಂಧಿಸಿದ ಅಧಿಕಾರಿಗಳು, ಗುತ್ತಿಗೆದಾರರಿಗೆ ಸೂಚಿಸಿದರು.
ಬಳಿಕ ಶಾಸಕ ನಾಗೇಂದ್ರ ಅವರು ಕಮ್ಮರಚೇಡು ಗ್ರಾಮದ ಮಾಳಗಡ್ಡ ಕ್ಯಾಂಪ್ ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿದರು.
ಈ ಮಾಳಗಡ್ಡ ಕ್ಯಾಂಪಿಗೆ ಮೂರು ಶಾಲಾ ಕೊಠಡಿ ಹಾಗೂ ಕಾಂಪೌಂಡ್ ನಿರ್ಮಾಣ ಮಾಡುವ ಹಿನ್ನಲೆಯಲ್ಲಿ ಸ್ಥಳ ಪರಿಶೀಲನೆ ನಡೆಸಿದರು. ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಅಡಿ ಅನುದಾನ ಒದಗಿಸಲಾಗುವುದು ಎಂದು ಅವರು ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಅಧಿಕಾರಿಗಳು ಹಾಗೂ ಗ್ರಾಮಸ್ಥರು ಇದ್ದರು.
*****