ಬಳ್ಳಾರಿ,ಜು.27: ಇಲ್ಲಿನ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ನೂತನ ಆಡಳಿತ ವಿಭಾಗದ ಕುಲಸಚಿವರಾಗಿ ಡಾ.ಎಸ್.ಸಿ.ಪಾಟೀಲ್ ಅವರು ಮಂಗಳವಾರ ಅಧಿಕಾರ ವಹಿಸಿಕೊಂಡರು.
ಪ್ರಭಾರ ಕಾರ್ಯಭಾರ ವಹಿಸಿಕೊಂಡಿದ್ದ ಮೌಲ್ಯಮಾಪನ ಕುಲಸಚಿವ ಪ್ರೊ.ಶಶಿಕಾಂತ್ ಎಸ್.ಉಡಿಕೇರಿ ಅವರು ಡಾ. ಪಾಟೀಲರಿಗೆ ಅಧಿಕಾರ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ವಿವಿ ಕುಲಪತಿ ಪ್ರೊ. ಸಿದ್ದು ಪಿ ಅಲಗೂರು ಉಪಸ್ಥಿತರಿದ್ದರು. ಡಾ.ಎಸ್.ಸಿ.ಪಾಟೀಲ್ ಅವರು ಬೆಳಗಾವಿಯ ರಾಣಿಚೆನ್ನಮ್ಮ ವಿಶ್ವವಿದ್ಯಾಲಯದಲ್ಲಿ ನಿರ್ವಹಣಾಶಾಸ್ತ್ರ ವಿಭಾಗದಲ್ಲಿ ಪ್ರಾಧ್ಯಾಪಕರಾಗಿದ್ದರು. ರಾಜ್ಯ ಸರಕಾರ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯಕ್ಕೆ ಕುಲಸಚಿವ (ಆಡಳಿತ) ರನ್ನಾಗಿ ನೇಮಿಸಿ ಆದೇಶ ಹೊರಡಿಸಿದೆ.
*****
👆ಡಾ. ಸಿ ಎಸ್ ಪಾಟೀಲ್