ಕರ್ನಾಟಕದ 30ನೇ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಪ್ರಮಾಣ ವಚನ

ಬೆಂಗಳೂರು: ರಾಜ್ಯದ 30ನೇ ಮುಖ್ಯಮಂತ್ರಿಗಳಾಗಿ ಬಸವರಾಜ ಬೊಮ್ಮಾಯಿ ರವರು ಬುಧವಾರ ಪ್ರಮಾಣ ವಚನ ಸ್ವೀಕರಿಸಿದರು.
ರಾಜಭವನದಲ್ಲಿ ರಾಜ್ಯದ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರು ಪ್ರಮಾಣ ವಚನ ಭೋಧಿಸಿದರು.
ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದು ನೂತನ ಮುಖ್ಯಮಂತ್ರಿಗಳಿಗೆ ಶುಭಕೋರಿದರು.
ಬಸವರಾಜ ಬೊಮ್ಮಾಯಿ ಅವರು ದೇವರ ಹೆಸರಿನಲ್ಲಿ ಪ್ರತಿಜ್ಞಾ ವಿಧಿ ಸ್ವೀಕರಿಸಿದರು.
ಪ್ರಮಾಣ ವಚನ ಸಮಾರಂಭಕ್ಕೆ ಬೊಮ್ಮಾಯಿ ಅವರ ಕುಟುಂಬದ ಸದಸ್ಯರು, ಗಣ್ಯರು, ಹಿರಿಯ ಅಧಿಕಾರಿಗಳು, ಸಾವಿರಾರು ಅಭಿಮಾನಿಗಳು ಸಾಕ್ಷಿಯಾದರು.
*****