ಬಳ್ಳಾರಿ, ಆ.14: ಸಾರಿಗೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರಾದ ಬಿ.ಶ್ರೀರಾಮುಲು ಅವರು ಶನಿವಾರ ನಗರದ ಪ್ರಾದೇಶಿಕ ಸಾರಿಗೆ(ಆರ್ ಟಿ ಓ) ಕಚೇರಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಇದೇ ಸಂದರ್ಭದಲ್ಲಿ ಸಾರಿಗೆ ಇಲಾಖೆಗೆ ಸಂಬಂಧಿಸಿದಂತೆ ವಿಭಾಗೀಯ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ಬಳಿಕ ಸಚಿವರು ನಗರದ ಕೆಎಸ್ಆರ್ ಟಿ ಸಿ ಡಿಪೋ ಪರಿಶೀಲನೆ ನಡೆಸಿದರು.
ಬಳ್ಳಾರಿ ನಗರ ಶಾಸಕ ಸೋಮಶೇಖರ್ ರೆಡ್ಡಿ, ಮಾಜಿ ಸಂಸದ ಸಣ್ಣ ಫಕ್ಕೀರಪ್ಪ ಮತ್ತಿತರರು ಇದ್ದರು
*****