ಬಳ್ಳಾರಿ,ಸೆ.23: ಪೌರ ಕಾರ್ಮಿಕರ ದಿನಾಚರಣೆ ಅಂಗವಾಗಿ ಪಾಲಿಕೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ 30 ಪೌರಕಾರ್ಮಿಕರು ಮತ್ತು ನೈರ್ಮಲ್ಯ ಮೇಸ್ತ್ರಿಗಳು ಹಾಗೂ ಸಿಬ್ಬಂದಿಯನ್ನು ಸನ್ಮಾನಿಸಲಾಯಿತು.
ನಗರದ ವಾಲ್ಮೀಕಿ ಭವನದಲ್ಲಿ ಗುರುವಾರ ನಡೆದ ಪೌರಕಾರ್ಮಿಕರ ದಿನಾಚರಣೆಯ ಕಾರ್ಯಕ್ರಮದಲ್ಲಿ ಪಾಲಿಕೆಯ ಆಡಳಿತ ಅಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿಗ ಪವನಕುಮಾರ ಮಾಲಪಾಟಿ ಅವರು ಪಾಲಿಕೆ ಸಿಬ್ಬಂದಿಯನ್ನು ಗೌರವಿಸಿ ಸನ್ಮಾನಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ನಗರ ಸ್ವಚ್ಛತೆಯಲ್ಲಿ ಪೌರಕಾರ್ಮಿಕರು ಸಲ್ಲಿಸುತ್ತಿರುವ ಸೇವೆಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಪೌರಕಾರ್ಮಿಕರ ದಿನಾಚರಣೆ ಅಂಗವಾಗಿ ಸರ್ಕಾರದ ನಿರ್ದೇಶನದಂತೆ ಎಲ್ಲಾ ಪೌರಕಾರ್ಮಿಕರಿಗೆ ಒಂದು ದಿನದ ಸಂಪೂರ್ಣ ರಜೆ ನೀಡಿ ಬಳ್ಳಾರಿ ಮಹಾನಗರ ಪಾಲಿಕೆಯಿಂದ ಕಾರ್ಯಕ್ರಮ ಹಾಗೂ ಸರ್ಕಾರದಿಂದ ದೊರೆಯುವ ವಿವಿಧ ಸೌಲಭ್ಯಗಳ ಕುರಿತಾದ ಜಾಗೃತಿ ಶಿಬಿರವನ್ನು ಏರ್ಪಡಿಸಲಾಗಿತ್ತು.
ಪಾಲಿಕೆ ಆಯುಕ್ತೆ ಪ್ರೀತಿ ಗೆಹ್ಲೋಟ್, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ರಮೇಶ್, ಪಾಲಿಕೆಯ ಆರೋಗ್ಯಾಧಿಕಾರಿ ಡಾ.ಹನುಮಂತಪ್ಪ, ಕಾರ್ಯಪಾಲಕ ಅಭಿಯಂತರ ಖಾಜಾ ಮೊಹಿನುದ್ದೀನ್, ವಲಯ ಆಯುಕ್ತರು, ಪರಿಸರ ಅಭಿಯಂತರರು, ಆರೋಗ್ಯ ನಿರೀಕ್ಷಕರು ಹಾಗೂ ಇತರೆ ಅಧಿಕಾರಿ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು