ಹಂಪಿ ಕನ್ನಡ ವಿವಿಯಲ್ಲಿ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರ ಮಹಾಪರಿನಿರ್ವಾಣ ದಿನ ಆಚರಣೆ

ಬಳ್ಳಾರಿ,ಡಿ.6: ಹಂಪಿ ಕನ್ನಡ ವಿಶ್ವವಿದ್ಯಾಲಯದ ದಲಿತ ಅಧ್ಯಯನ ಪೀಠ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರ ಮಹಾಪರಿನಿರ್ವಾಣ ದಿನವನ್ನು ಸೋಮವಾರ ಸರಳವಾಗಿ ಆಚರಿಸಿತು.
ವಿಶ್ವವಿದ್ಯಾಲಯದ ಕುಲಪತಿ ಡಾ.ಸ.ಚಿ.ರಮೇಶ ಅವರು ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.
ಈ ಸಂದರ್ಭದಲ್ಲಿ ಕುಲಸಚಿವ ಡಾ.ಎ.ಸುಬ್ಬಣ್ಣ ರೈ ಹಾಗೂ ದಲಿತ ಅಧ್ಯಯನ ಪೀಠದ ಸಂಚಾಲಕ ಡಾ. ವೆಂಕಟಗಿರಿ ದಳವಾಯಿ ಇದ್ದರು.
*****