ಬಳ್ಳಾರಿಯಲ್ಲಿ ಹುತಾತ್ಮರ ದಿನಾಚರಣೆ

ಬಳ್ಳಾರಿ,ಜ.30: ಭಾರತ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಪ್ರಾಣತೆತ್ತು ಹುತಾತ್ಮರಾದವರ ಸ್ಮರಣಾರ್ಥ ನಗರದ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗದಲ್ಲಿರುವ ರಾಷ್ಟ್ರಪಿತ ಮಹಾತ್ಮಗಾಂಧಿ ಅವರ ಪ್ರತಿಮೆ ಎದುರುಗಡೆ ಎರಡು ನಿಮಿಷಗಳ ಕಾಲ ಮೌನಚರಣೆ ಮಾಡಿ ನಮನ ಸಲ್ಲಿಸಲಾಯಿತು.
ರಾಜ್ಯದ ವಿವಿಧೆಡೆಯಂತೆ ಸರಿಯಾಗಿ ಬೆಳಗ್ಗೆ 11ಕ್ಕೆ ಎರಡು ನಿಮಿಷಗಳ ಕಾಲ ಮೌನಾಚರಣೆ ಮಾಡಿ ನಮನ ಸಲ್ಲಿಸಲಾಯಿತು.
ಜಿಲ್ಲಾಧಿಕಾರಿ ಪವನಕುಮಾರ ಮಾಲಪಾಟಿ, ಅಪರ ಜಿಲ್ಲಾಧಿಕಾರಿ ಪಿ.ಎಸ್.ಮಂಜುನಾಥ ಅವರು ಮಹಾತ್ಮಗಾಂಧೀಜಿ ಅವರ ಪ್ರತಿಮೆಗೆ ಪೂಜೆ ಸಲ್ಲಿಸಿ ಪುಷ್ಪನಮನ ಸಲ್ಲಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ರಮೇಶ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಬಿ.ಕೆ.ರಾಮಲಿಂಗಪ್ಪ, ಶಿರಸ್ತೇದಾರರಾದ ರವೀಂದ್ರಬಾಬು, ಸುಜಾತಾ, ಜಿಲ್ಲಾಧಿಕಾರಿಗಳ ಆಪ್ತ ಸಹಾಯಕ ಮಂಜುನಾಥಗೌಡ, ಜಿಲ್ಲಾಧಿಕಾರಿಗಳ ಕಚೇರಿ ಸಿಬ್ಬಂದಿಗಳಾದ ಇಕ್ಬಾಲ್, ಪ್ರಭಾಕರ, ನಿರಂಜನ, ರಾಜೇಶ, ಮೇರಿ, ನಯನಾ,ಅರ್ಚನಾ,ಸುಮಲತಾ,ಮಂಜುಳಾ, ಶೀಲಾ,ಹಸೀನಾ, ಪ್ರವೀಣ ಮತ್ತಿತರರು ಇದ್ದರು.