ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಸದಸ್ಯ, ಶಾಸಕ ಜಿ.ಸೋಮಶೇಖರ ರೆಡ್ಡಿ ಅವರಿಗೆ ಸನ್ಮಾನ

ಬಳ್ಳಾರಿ, ಫೆ.28: ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಸದಸ್ಯರಾಗಿ ನೇಮಕವಾಗಿರುವ ನಗರ ಶಾಸಕ ಜಿ.ಸೋಮಶೇಖರ ರೆಡ್ಡಿ ಅವರನ್ನು ಕಲ್ಯಾಣ ಕರ್ನಾಟಕ ಕಲಾವಿದರ ಒಕ್ಕೂಟ ಅಭಿನಂದಿಸಿತು.
ಕಲ್ಯಾಣ ಕರ್ನಾಟಕ ಕಲಾವಿದರ ಒಕ್ಕೂಟದ ರಾಜ್ಯ ಉಪಾಧ್ಯಕ್ಷರೂ ಆಗಿರುವ ಪತ್ರಿಕಾ ಛಾಯಾಗ್ರಾಹಕ ಪುರುಷೋತ್ತಮ‌ ಹಂದ್ಯಾಳ್ ಅವರು ಭಾನುವಾರ ನಗರದಲ್ಲಿ ಶಾಸಕ ರೆಡ್ಡಿ ಅವರನ್ನು ಸನ್ಮಾನಿಸಿ ಗೌರವಿಸಿದರು.
ಇದೇ ಸಂದರ್ಭದಲ್ಲಿ ಕಲ್ಯಾಣ ಕರ್ನಾಟಕದ ವಿಶೇಷವಾಗಿ ಬಳ್ಳಾರಿ ಜಿಲ್ಲೆಯ ಕಲಾವಿದರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಮನವಿ ಪತ್ರ ನೀಡಿ ವಿನಂತಿಸಿದರು.
ಸಕಾರಾತ್ಮಕವಾಗಿ ಸ್ಪಂದಿಸಿದ ಶಾಸಕರು ಕಲ್ಯಾಣ ಕರ್ನಾಟಕ ಕಲಾವಿದರ ಬೇಡಿಕೆಗಳ ಕುರಿತು ಮಂಡಳಿ ಸಭೆಯಲ್ಲಿ ಗಮನ ಸೆಳೆಯಲಾಗುವುದು ಎಂದು ಹೇಳಿದರು.


*****