ಬಳ್ಳಾರಿ, ಮಾ. 1: ನಗರದ ವೃಕ್ಷ ದೀಪಾ ಎಜುಕೇಶನಲ್ ಅಂಡ್ ಚಾರಿಟಬಲ್ ಟ್ರಸ್ಟ್
ಅಂತಾರಾಷ್ಟ್ರೀಯ ವಿಜ್ಞಾನ ದಿನವನ್ನು ವಿಶಿಷ್ಟವಾಗಿ ಆಚರಿಸಿತು.
ಮಹಿಳೆಯರಿಗೆ ರಂಗೋಲಿ ಸ್ಪರ್ಧೆ ಮತ್ತು ಮಕ್ಕಳಿಗೆ ಪರಿಸರ ಚಿತ್ರ ಬಿಡಿಸುವ ಸ್ಪರ್ಧೆ ಏರ್ಪಡಿಸಿ ಬಹುಮಾನ ವಿತರಿಸಲಾಯಿತು. ವಿಶ್ವ ವಿಖ್ಯಾತ ವಿಜ್ಞಾನಿ ಸರ್ ಸಿ.ವಿ.ರಾಮನ್ ಅವರ ಭಾವಚಿತ್ರಕ್ಕೆ ನಮನ ಸಲ್ಲಿಸಿ ಅವರ ಸೇವೆಯನ್ನು ಸ್ಮರಿಸಲಾಯಿತು. ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಿದ್ದಲಿಂಗೇಶ ಕೆ ರಂಗಣ್ಣನವರ್, ಅಭಿನಯ ಕಲಾಕೇಂದ್ರದ ರಂಗನಿರ್ದೇಶಕ ಕೆ. ಜಗದೀಶ್ ಅವರು ಉಪಸ್ಥಿರಿದ್ದು ಶುಭ ಹಾರೈಸಿದರು.
ಟ್ರಸ್ಟ್ ಅಧ್ಯಕ್ಷರೂ ಆಗಿರುವ ಪ್ರತಿಷ್ಠಿತ ನೈಟಿಂಗೇಲ್ ರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತರಾದ ಶಾಂತಾಬಾಯಿ ಕಟ್ಟೀಮನಿಯವರು ಸ್ಪರ್ಧಿಗಳಿಗೆ ಬಹುಮಾನ ವಿತರಿಸಿ ವಂದಿಸಿದರು.
ವಿಜಯಲಕ್ಷ್ಮಿ, ರೂಪ, ಗೌರಿ, ತಿಪ್ಪಮ್ಮ, ಮನೋರಮ ಸೋನಿ ಮತ್ತು ಕೆ.ಜಿ. ಮಂಜುನಾಥ್ ಉಪಸ್ಥಿತರಿದ್ದರು.
*****