ಕಲಬುರಗಿ, ಆ.8: ಕಲಬುರಗಿಯ ಶರಣಬಸವ ವಿಶ್ವವಿದ್ಯಾಲಯವು ಕರ್ನಾಟಕ ಜಾನಪದ ಅಕಾಡೆಮಿ ಅಧ್ಯಕ್ಷೆ, ಪದ್ಮಶ್ರೀ ಪುರಸ್ಕೃತೆ ಬಿ. ಮಂಜಮ್ಮ ಜೋಗತಿ ಅವರಿಗೆ ಗೌರವ ಡಾಕ್ಟರೇಟ್ ಪದವಿ ಘೋಷಿಸಿದೆ.
ಬರುವ ಸೆ. ರಂದು ನಡೆಯುವ ವಿವಿಯ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಗೌರವ ಡಾಕ್ಟರೇಟ್ ಪ್ರಶಸ್ತಿ ಪ್ರದಾನ ಮಾಡಲಾಗುವುದೆಂದು ಶರಣಬಸವ ವಿಶ್ವವಿದ್ಯಾಲಯದ ಪ್ರಕಟಣೆ ತಿಳಿಸಿದೆ.
ಅಭಿನಂದನೆ: ಕಲಬುರಗಿಯ ಶರಣಬಸವ ವಿಶ್ವವಿದ್ಯಾಲಯದ ಗೌರವ ಡಾಕ್ಟರೇಟ್ ಪದವಿಗೆ ಪಾತ್ರರಾದ ಕರ್ನಾಟಕ ಜಾನಪದ ಅಕಾಡೆಮಿ ಅಧ್ಯಕ್ಷೆ, ಪದ್ಮಶ್ರೀ ಪುರಸ್ಕೃತೆ ಬಿ. ಮಂಜಮ್ಮ ಜೋಗತಿ ಅವರನ್ನು ಗುಲ್ಬರ್ಗಾ ವಿವಿ ಮಾಜಿ ಸೆನೆಟ್ ಸದಸ್ಯ, ಹಿರಿಯ ಪತ್ರಕರ್ತ ಸಿ. ಮಂಜುನಾಥ್ ಅಭಿನಂದಿಸಿದ್ದಾರೆ.
*****