ಬಳ್ಳಾರಿ, ಆ.16: ನಗರದ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ (ಸಿ ಬಿ ಆರ್ ಸೆಟಿ) ಸೆ.1ರಿಂದ 30 ರವರಗೆ ಗ್ರಾಮೀಣ ಪ್ರದೇಶದ ಮಹಿಳೆಯರಿಗೆ ಟೈಲರಿಂಗ್ ಸ್ವ ಉದ್ಯೋಗ ತರಬೇತಿಯನ್ನು ನೀಡಲಿದೆ.
ಹೆಚ್ಚುವರಿ 30 ಜನರಿಗೆ ಮಾತ್ರ ಅವಕಾಶವಿದ್ದು ನೋಂದಾಯಿಸದೇ ಇರುವಂತಹ ಅಭ್ಯರ್ಥಿಗಳು ಆ. 31 ರೊಳಗೆ ತಮ್ಮ ಹೆಸರನ್ನು ನೊಂದಾಯಿಸಬಹುದು.
ಊಟ, ವಸತಿಯೊಂದಿಗೆ ತರಬೇತಿ ಸಂಪೂರ್ಣ ಉಚಿತವಾಗಿರುತ್ತದೆ.
ಗ್ರಾಮೀಣ ಪ್ರದೇಶದ ಬಿ.ಪಿ.ಎಲ್ ಅಭ್ಯರ್ಥಿಗಳಿಗೆ ಮಾತ್ರ ತರಬೇತಿ ನೀಡಲಾಗುವುದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.
ಹೆಚ್ಚಿನ ಮಾಹಿತಿಗಾಗಿ ದೂ.ಸಂಖ್ಯೆ 9008464120.08392 299117 ಸಮಯ ಬೆಳಿಗ್ಗೆ 9.30 ರಿಂದ ಸಂಜೆ 5.30 ರ ವರೆಗೆ ಕರೆ ಮಾಡಬಹುದು.
*****