ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ -ಪ್ರಭಾರಿ ಮುಖ್ಯ ಶಿಕ್ಷಕಿ ಮೀನಾಕ್ಷಿ ಕಾಳೆ

ಬಳ್ಳಾರಿ, ಆ.19:ಪರಿಸರ ಸಂರಕ್ಷಿಸುವುದು ಪ್ರತಿಯೊಬ್ಬರ ಜವಾಬ್ದಾರಿ ಎಂದು ಹಲಕುಂದಿ ಸಕಿಪ್ರಾ ಶಾಲೆಯ ಪ್ರಭಾರಿ ಮುಖ್ಯೋಪಾಧ್ಯಾಯಿನಿ ಮೀನಾಕ್ಷಿ ಕಾಳೆ ಅವರು ಹೇಳಿದರು.
ತಾಲೂಕಿನ ಹಲಕುಂದಿ ವಿಬಿಎಸ್ ಮಠ ಸಕಿಪ್ರಾ ಶಾಲೆ, ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ‌ ಹಾಗೂ ನಗರದ ಬಿ ಸಿ ಟ್ರಸ್ಟ್ ಸಹಯೋಗದಲ್ಲಿ ಗುರುವಾರ ಶಾಲಾ ಆವರಣದಲ್ಲಿ ಜರುಗಿದ ಪರಿಸರ ಜಾಗೃತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.


ಖ್ಯಾತ ಪರಿಸರವಾದಿ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರ ಪರಿಸರ ಪ್ರೇಮ, ಆದರ್ಶಗಳನ್ನು ವಿದ್ಯಾರ್ಥಿಗಳು ತಮ್ಮ‌ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.
ಉತ್ತಮ ಪರಿಸರವಿದ್ದರೆ ಆರೋಗ್ಯವೂ ಚೆನ್ನಾಗಿರುತ್ತದೆ ಎಂದು ಉದಾಹರಣೆ ಸಹಿತ ಮಕ್ಕಳಿಗೆ ತಿಳಿಸಿದರು.
ಕಾರ್ಯಕ್ರಮ ಉದ್ಘಾಟಿಸಿದ ಹಲಕುಂದಿ ಗ್ರಾಮ ಪಂಚಾಯತಿ ಸದಸ್ಯ ಡಿ ಎಚ್ ನಾಗರಾಜ್ ಮಾತನಾಡಿ, ಶಾಲೆಯ ಪ್ರತಿ ವಿದ್ಯಾರ್ಥಿಗಳು ತಮ್ಮ ಮನೆಯ ಮುಂದೆ ಗಿಡ ನೆಡುವ ಮೂಲಕ ಪರಿಸರ ಕಾಳಜಿ ತೋರಬೇಕು ಎಂದು ಹೇಳಿದರು.
ಕಾಲೋನಿಯ ಯುವ ಮುಖಂಡ ಅಂಜಿನಪ್ಪ, ಅತಿಥಿ ಶಿಕ್ಷಕಿ ಕೆ. ಹೊನ್ನೂರಮ್ಮ, ಹಿರಿಯ ಅಡುಗೆ ಸಹಾಯಕಿ ಹೇಮಾವತಿ, ಸಂಸ್ಥೆಯ ಸೇವಾ ಪ್ರತಿನಿಧಿ ಕೊಟ್ರಮ್ಮ, ಸಂಘದ ಸದಸ್ಯರು ಪರಿಸರ ಜಾಗೃತಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ  ಬಳ್ಳಾರಿ ತಾಲೂಕು -2 ಕೃಷಿ ಮೇಲ್ವಿಚಾರಕರಾದ ವಿನಯ್ ಸ್ವಾಗತಿಸಿ, ನಿರ್ವಹಿಸಿದರು. ಅತಿಥಿ ಶಿಕ್ಷಕಿ ಮಂಜುಳಾ ವಂದಿಸಿದರು.
*****