ರಾಜ್ಯದ ಹೈಕೋರ್ಟ್ ನೂತನ ಮುಖ್ಯ ನ್ಯಾಯಮೂರ್ತಿಗಳಾಗಿ ನ್ಯಾ. ಪ್ರಸ‌ನ್ನ ಬಾಲಚಂದ್ರ ವರಳೆ ಪ್ರಮಾಣ ವಚನ

ಬೆಂಗಳೂರು, ಅ.16: ನ್ಯಾ. ಪ್ರಸ‌ನ್ನ ಬಾಲಚಂದ್ರ ವರಳೆ ಅವರು ಕರ್ನಾಟಕ ಹೈಕೋರ್ಟ್ ನ ನೂತನ ಮುಖ್ಯ ನ್ಯಾಯಮೂರ್ತಿಗಳಾಗಿ ಶನಿವಾರ ಪ್ರಮಾಣವಚನವನ್ನು ಸ್ವೀಕರಿಸಿದರು.
ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ರಾಜಭವನದಲ್ಲಿ ಕರ್ನಾಟಕ ಹೈಕೋರ್ಟ್ ನ ನೂತನ ಮುಖ್ಯ ನ್ಯಾಯಮೂರ್ತಿಗಳಿಗೆ ಪದವಿಯ ಅಧಿಕಾರ ಪ್ರಮಾಣವಚನವನ್ನು ಬೋಧಿಸಿದರು.
ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.
*****