ಬಳ್ಳಾರಿಯಲ್ಲಿ ವಿಶ್ವ ಕ್ಷಯರೋಗ ದಿನಾಚರಣೆ: ಜಾಗೃತಿ ಜಾಥಾಗೆ ಜಿಲ್ಲಾಧಿಕಾರಿ ಮಾಲಪಾಟಿ ಚಾಲನೆ

ಬಳ್ಳಾರಿ: ವಿಶ್ವ ಕ್ಷಯರೋಗ ದಿನಾಚರಣೆ ಅಂಗವಾಗಿ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಪವನಕುಮಾರ್ ಮಾಲಪಾಟಿ ಅವರು ಬುಧವಾರ ಜಿಲ್ಲಾಸ್ಪತ್ರೆ ಆವರಣದಲ್ಲಿ ಚಾಲನೆ ನೀಡಿದರು‌. ಜಿಲ್ಲಾಡಳಿತ, ಜಿಪಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವಿಜಯನಗರ ವೈದ್ಯಕೀಯ…

ಬಿ ಟಿ ಲಲಿತಾನಾಯಕ, ಡಾ. ಶಿವರಾಜಕುಮಾರ್ ಗೆ ಜೀವ ಬೆದರಿಕೆ: ಸೂಕ್ತ ಭದ್ರತೆಗೆ ಕರ್ನಾಟಕ ಸಮರ ಸೇನೆ ಬಳ್ಳಾರಿ ಜಿಲ್ಲಾ ಘಟಕ ಒತ್ತಾಯ

ಬಳ್ಳಾರಿ: ಮಾಜಿಸಚಿವೆ, ಸಾಹಿತಿ ಬಿ.ಟಿ. ಲಲಿತಾ ನಾಯಕ್ ಮತ್ತು ಖ್ಯಾತ ಚಲಚಿತ್ರ ನಟ ಡಾIIಶಿವರಾಜ್ ಕುಮಾರ್ ಅವರಿಗೆ ಸಮಾಜ ಘಾತುಕ ವ್ಯಕ್ತಿಗಳಿಂದ ಕೊಲೆ ಬೆದರಿಕೆ ಕರೆ, ಪತ್ರಗಳು ಬಂದಿರುವ ಹಿನ್ನಲೆಯಲ್ಲಿ ರಾಜ್ಯ ಸರಕಾರ ಕೂಡಲೇ ಅಗತ್ಯ ಪೊಲೀಸ್ ರಕ್ಷಣೆ ನೀಡಬೇಕು ಎಂದು…

ವಿಎಸ್ ಕೆ ವಿವಿಯಲ್ಲಿ ಪ್ರಸಾರಂಗದ ಉದ್ಘಾಟನೆ: ಜನಸಾಮಾನ್ಯರ ಕಷ್ಟಕಾರ್ಪಣ್ಯ ಅರಿಯಲು ಪ್ರಾಧ್ಯಾಪಕರು ಗ್ರಾಮವಾಸ್ತವ್ಯ ಮಾಡಬೇಕು -ಕುಲಪತಿ ಪ್ರೊ.ಸ.ಚಿ.ರಮೇಶ್

ಬಳ್ಳಾರಿ: ಸರ್ಕಾರಿ ಅಧಿಕಾರಿಗಳಂತೆ ವಿಶ್ವವಿದ್ಯಾಲಯದ ಪ್ರಾಧ್ಯಾಪಕರುಗಳು ಕನಿಷ್ಠ 4 ದಿನಗಳು ಗ್ರಾಮ ವಾಸ್ತವ್ಯ ಮಾಡಬೇಕು; ಆಗ ಜನಸಾಮಾನ್ಯರ ಕಷ್ಟ ಕಾರ್ಪಣ್ಯಗಳನ್ನು ಕಿರುಹೊತ್ತಿಗೆಗಳ ಮೂಲಕ ಬರೆದು ಹೊರತರಲು ಸಾಧ್ಯವಾಗುತ್ತದೆ ಎಂದು ಹಂಪಿ ಕನ್ನಡ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ. ಸ.ಚಿ.ರಮೇಶ ಹೇಳಿದರು. ನಗರದ ಹೊರವಲಯದ…

ಬಳ್ಳಾರಿ: ಶ್ರೀ ಕನಕದುರ್ಗಮ್ಮ ಸಿಡಿಬಂಡಿ ರಥೋತ್ಸವ

ಬಳ್ಳಾರಿಯ ಶ್ರೀ ಕನಕದುರ್ಗಮ್ಮ ದೇವಸ್ಥಾನದ ಸಿಡಿಬಂಡಿ ರಥೋತ್ಸವ ಅತ್ಯಂತ ಸುಸೂತ್ರವಾಗಿ ಮಂಗಳವಾರ ಬೆಳಗ್ಗೆ ಜರುಗಿತು. ಸಮಾಜಕಲ್ಯಾಣ ಸಚಿವ ಬಿ.ಶ್ರೀರಾಮುಲು ಸೇರಿದಂತೆ ಸಾವಿರಾರು ಜನರು ಈ ಸಿಡಿಬಂಡಿ ರಥೋತ್ಸವಕ್ಕೆ ಸಾಕ್ಷಿಯಾದರು.

ಉತ್ತನೂರಿನಲ್ಲಿ ಜಿಲ್ಲಾಧಿಕಾರಿ ಗ್ರಾಮವಾಸ್ತವ್ಯ’ ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿ ಪರಿಹರಿಸುವುದೇ ಗ್ರಾಮವಾಸ್ತವ್ಯದ ಮುಖ್ಯ ಉದ್ದೇಶ -ಡಿಸಿ ಮಾಲಪಾಟಿ

ಬಳ್ಳಾರಿ: ಮನೆ-ಮನೆಗೆ ಭೇಟಿ ನೀಡಿ ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿ ಪರಿಹರಿಸುವುದೇ ಗ್ರಾಮವಾಸ್ತವ್ಯದ ಮುಖ್ಯ ಉದ್ದೇಶ ಎಂದು ಜಿಲ್ಲಾಧಿಕಾರಿ ಪವನ ಕುಮಾರ್ ಮಾಲಪಟಿ ಅವರು ಹೇಳಿದರು. ಸಿರುಗುಪ್ಪ ತಾಲೂಕಿನ ಉತ್ತನೂರು ಗ್ರಾಮದಲ್ಲಿ ಶನಿವಾರ ನಡೆದ ಗ್ರಾಮ ವಾಸ್ತವ್ಯದ ವೇದಿಕೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.…

ಮಾ.20ರಂದು ಬಳ್ಳಾರಿ ಡಿಸಿ ಉತ್ತನೂರು ಗ್ರಾಮದಲ್ಲಿ ಗ್ರಾಮವಾಸ್ತವ್ಯ

ಬಳ್ಳಾರಿ: ಜಿಲ್ಲಾಧಿಕಾರಿ ಪವನಕುಮಾರ್ ಮಾಲಪಾಟಿ ಅವರು ಸಿರಗುಪ್ಪ ತಾಲೂಕಿನ ಕರೂರು ಹೋಬಳಿಯ ಉತ್ತನೂರು ಗ್ರಾಮದಲ್ಲಿ ಮಾ.20ರಂದು ಶನಿವಾರ ಗ್ರಾಮವಾಸ್ತವ್ಯ ಕಾರ್ಯಕ್ರಮದಲ್ಲಿ ಭಾಗವಹಿಸಿ ಗ್ರಾಮಸ್ಥರ ದೂರು-ದುಮ್ಮಾನ ಆಲಿಸಲಿದ್ದಾರೆ. ಈ ಹಿನ್ನಲೆಯಲ್ಲಿ ಸಿದ್ಧತೆಗಳು ಭರದಿಂದ ಸಾಗಿದ್ದು, ಜಿಲ್ಲಾಧಿಕಾರಿಗಳಿಗೆ ವಿವಿಧ ಇಲಾಖೆಗಳ ಅಧಿಕಾರಿಗಳು ಸಾಥ್ ನೀಡಲಿದ್ದಾರೆ.…

ಅರಣ್ಯ ನಾಶದಿಂದ ಪರಿಸರ ಮೇಲೆ ದುಷ್ಪರಿಣಾಮ: ಎಂ ಆರ್ ವಿಜಯ್ ಕುಮಾರ್ ಕಳವಳ

ಬಳ್ಳಾರಿ: ಅರಣ್ಯ ನಾಶದಿಂದ ಪರಿಸರದ ಮೇಲೆ ತೀವ್ರ ದುಷ್ಪರಿಣಾಮಗಳಾಗಿ ಅತಿವೃಷ್ಟಿ ಮತ್ತು ಅನಾವೃಷ್ಟಿಗಳು ಹೆಚ್ಚುತ್ತಿವೆ ಎಂದು ಸಾಮಾಜಿಕ ಉಪ ಅರಣ್ಯ ಸಂರಕ್ಷಣಾಧಿಕಾರಿ ಎಂ.ಆರ್.ವಿಜಯಕುಮಾರ್ ಕಳವಳ ವ್ಯಕ್ತಪಡಿಸಿದರು. ನಗರದ ಹೊಯ್ಸಳ ಹೊಟೇಲ್ ಸಭಾಂಗಣದಲ್ಲಿ ಸಾಮಾಜಿಕ ಅರಣ್ಯ ಇಲಾಖೆಯಿಂದ ಕೃಷಿ ಅರಣ್ಯೀಕರಣ ಉಪ ಅಭಿಯಾನದಡಿ…

ಹಂಪಾಪಟ್ಟಣ ತಾಪಂ ಜಿಪಂ ಕ್ಷೇತ್ರ ಉಳಿಸಲು ಆಗ್ರಹ: ರದ್ದಾಗದಿದ್ದರೆ ಮಾ. 29ರ ಗ್ರಾಪಂ ಚುನಾವಣೆ ಬಹಿಷ್ಕಾರ-ಜಿಲ್ಲಾಧಿಕಾರಿಗಳಿಗೆ ಗ್ರಾಮಸ್ಥರ ಎಚ್ಚರಿಕೆ

ಬಳ್ಳಾರಿ: ಹಗರಿಬೊಮ್ಮನಹಳ್ಳಿ ತಾಲೂಕಿನ ಹಂಪಾಪಟ್ಟಣ ಜಿಲ್ಲಾ ಪಂಚಾಯಿತಿ, ತಾಪಂ ಕ್ಷೇತ್ರವನ್ನು ಈಗಿರುವಂತೆ ಮುಂದುವರೆಸಬೇಕು ಗ್ರಾಮಸ್ಥರು ಜಿಲ್ಲಾಧಿಕಾರಿಗಳನ್ನು ಆಗ್ರಹಿಸಿದರು. ಜಿಲ್ಲಾ ಕೇಂದ್ರದಿಂದ 90 ಕಿ ಮೀ ಅಂತರವಿರುವ ಹಂಪಾಪಟ್ಟಣ ಗ್ರಾಮದಿಂದ ಪಕ್ಷಾತೀತವಾಗಿ ನೂರಕ್ಕೂ ಹೆಚ್ಚು ಗ್ರಾಮಸ್ಥರು ಮಂಗಳವಾರ ಸಂಜೆ ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಲು…

ಸಾರ್ವಜನಿಕರ ಅಹವಾಲು ಆಲಿಕೆಗೆ ಸಮಯ ನಿಗದಿಪಡಿಸಿದ ಡಿಸಿ ಮಾಲಪಾಟಿ

ಬಳ್ಳಾರಿ: ಜಿಲ್ಲೆಯ ಸಾರ್ವಜನಿಕರ ಕುಂದುಕೊರತೆಗಳು ಮತ್ತು ಸಮಸ್ಯೆಗಳು ಹಾಗೂ ಅಹವಾಲುಗಳ ಆಲಿಕೆಗೆ ಜಿಲ್ಲಾಧಿಕಾರಿ ಪವನಕುಮಾರ್ ಮಾಲಪಾಟಿ ಅವರು ಸಮಯ ಮೀಸಲಿಟ್ಟಿದ್ದಾರೆ. ಈ ಸಂದರ್ಭದಲ್ಲಿ ಜನರು ಆಗಮಿಸಿ ತಮ್ಮ ಅಹವಾಲುಗಳನ್ನು ಸಲ್ಲಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ. ಸಾರ್ವಜನಿಕರು ಬೆಳಗ್ಗೆ 11ರಿಂದ…

ರಂಗ ಕಲಾವಿದರಿಗೆ ಕಲಾಭೂಷಣ ಚಲ್ಲೂರು ‌ಭೀಮಪ್ಪ ಶೆಟ್ಟಿ ಪ್ರಶಸ್ತಿ ಪ್ರದಾನ

ಬಳ್ಳಾರಿ: ಬಳ್ಳಾರಿ ಕಲ್ಚರಲ್ ಆಕ್ಟಿವಿಟೀಸ್ ಅಸೋಸಿಯೇಷನ್ ವತಿಯಿಂದ ನಗರದ ಬಿಪಿಎಸ್ ಸಿ ಕಾಲೇಜಿನ ಸಭಾಭವನದಲ್ಲಿ ಕಲಾಭೂಷಣ ಚಲ್ಲೂರು ‌ಭೀಮಪ್ಪ ಶೆಟ್ಟಿ ಪ್ರಶಸ್ತಿ ಪ್ರದಾನ ಸಮಾರಂಭ ಜರುಗಿತು. ರಂಗ ಕಲಾವಿದರಾದ ಟಿ. ನಾಗಭೂಷಣ, ಯತಿರಾಜುಲು, ವೆಂಕಟೆಶುಲು ಮತ್ತಿತರರಿಗೆ ಕಲಾಭೂಷಣ ಚಲ್ಲೂರು ‌ಭೀಮಪ್ಪ ಶೆಟ್ಟಿ…