ಏಳನೇ ವೇತನ ಆಯೋಗ ವರದಿ ಸಲ್ಲಿಕೆ: ಶೇ. 27.5 ರಷ್ಟು ಹೆಚ್ಚಳಕ್ಕೆ ಶಿಫಾರಸು: ವರದಿಯ ಶಿಫಾರಸುಗಳನ್ನು ಪರಿಶೀಲಿಸಿ, ಸೂಕ್ತ ತೀರ್ಮಾನ -ಮುಖ್ಯಮಂತ್ರಿ ಸಿದ್ದರಾಮಯ್ಯ

  ಬೆಂಗಳೂರು, ಮಾ. 16: ರಾಜ್ಯದ 7ನೇ ವೇತನ ಆಯೋಗವು ಇಂದು ವರದಿಯನ್ನು ಸಲ್ಲಿಸಿದ್ದು ಮೂಲವೇತನದ ಶೇಕಡ 27.5 ರಷ್ಟು ಹೆಚ್ಚಳ ಮಾಡಲು ಶಿಫಾರಸು ಮಾಡಿದೆ. ವರದಿಯನ್ನು ಪರಿಶೀಲಿಸಿ ಸರ್ಕಾರ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು…

ಬಳ್ಳಾರಿ ವಿ ಎಸ್ ಕೆ ವಿಶ್ವವಿದ್ಯಾಲಯದ ನೂತನ ಕುಲಪತಿಗಳಾಗಿ ಡಾ. ಕೆ ಎಂ ಮೇತ್ರಿ ಅಧಿಕಾರ ಸ್ವೀಕಾರ

ಬಳ್ಳಾರಿ, ಮಾ.6: ಇಲ್ಲಿನ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಕುಲಪತಿಯಾಗಿ ಹಂಪಿ ಕನ್ನಡ ವಿಶ್ವವಿದ್ಯಾಲಯದ ಬುಡಕಟ್ಟು ಅಧ್ಯಯನದ ವಿಭಾಗದ ಪ್ರಾಧ್ಯಾಪಕ ಪ್ರೊ ಕೆ ಎಂ ಮೇತ್ರಿ ಅವರು ಅಧಿಕಾರ ವಹಿಸಿಕೊಂಡರು. ಕರ್ನಾಟಕ ವಿಶ್ವವಿದ್ಯಾಲಯಗಳ ಕುಲಾಧಿಪತಿಗಳೂ ಆಗಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್…

ಸಿಎಂ ಸಿದ್ದರಾಮಯ್ಯ ಸಮ್ಮುಖದಲ್ಲಿ ಮಹತ್ವದ ₹2,300 ಕೋಟಿ ರೂ. ಯೋಜನೆಗೆ ಅಸ್ತು: ದೇಶದ ಪ್ರಪ್ರಥಮ ವಿಮಾನ ನಿರ್ವಹಣೆ, ದುರಸ್ತಿ ಯೋಜನೆಗೆ ಚಾಲನೆ -ಕೈಗಾರಿಕಾ ಸಚಿವ ಎಂ ಬಿ ಪಾಟೀಲ

ಬೆಂಗಳೂರು: ಟಾಟಾ ಸಮೂಹದ ಭಾಗವಾಗಿರುವ ಏರ್ ಇಂಡಿಯಾ ಮತ್ತು ಟಾಟಾ ಅಡ್ವಾನ್ಸ್ಡ್ ಸಿಸ್ಟಮ್ಸ್ ಲಿಮಿಟೆಡ್ ರಾಜ್ಯದಲ್ಲಿ ವಿವಿಧ ಯೋಜನೆಗಳಿಗೆ 2,300 ಕೋಟಿ ರೂ. ಹೂಡಿಕೆ ಮಾಡಲು ಮುಂದಾಗಿವೆ. ಈ ಸಂಬಂಧವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ…

ಬಸವಣ್ಣ, ಕನಕದಾಸ, ಅಂಬೇಡ್ಕರ್, ವೇಮನ ಯಾರೂ ಒಂದು ಜಾತಿಗೆ ಸೀಮಿತರಲ್ಲ, ಮನುಕುಲಕ್ಕೆ ಸೇರಿದವರು -ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ಜ.20: ಬಸವಣ್ಣ, ಕನಕದಾಸ, ಅಂಬೇಡ್ಕರ್, ವೇಮನ ಯಾರೂ ಒಂದು ಜಾತಿಗೆ ಸೀಮಿತರಾದವರಲ್ಲ. ಇವರೆಲ್ಲರೂ ವಿಶ್ವ ಮಾನವರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಶುಕ್ರವಾರ ಆಯೋಜಿಸಿದ್ದ ಶ್ರೀ ಮಹಾಯೋಗಿ ವೇಮನ ಜಯಂತಿಯನ್ನು…

ಬಸವಣ್ಣ ಕರ್ನಾಟಕದ ಸಾಂಸ್ಕೃತಿಕ ನಾಯಕ: ಸಚಿವ ಸಂಪುಟದ ಒಪ್ಪಿಗೆ -ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ಜ. 18: ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಎಂದು ಗೌರವಿಸಲು ಸಚಿವ ಸಂಪುಟದಲ್ಲಿ ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಗುರುವಾರ ಲಾಲ್ ಬಾಗ್ ನ ಗಾಜಿನ ಮನೆಯಲ್ಲಿ ವಿಶ್ವಗುರು ಬಸವಣ್ಣ ಮತ್ತು ವಚನ ಸಾಹಿತ್ಯಾಧಾರಿತ ಗಣರಾಜ್ಯೋತ್ಸವ ಫಲಪುಷ್ಪ ಪ್ರದರ್ಶನ…

ನಕ್ಸಲೈಟ್ ಸೀತಕ್ಕ ಸಚಿವೆಯಾದ ಕಥೆ -ಜಗದೀಶ್ ಕೊಪ್ಪ, ಬೆಂಗಳೂರು

ತೆಲಂಗಾಣದ ನೂತನ ಸರ್ಕಾರದಲ್ಲಿ ದನಸರಿ ಅನುಸೂಯಾ ಎಂಬ ಹೆಸರಿನ ಹಾಗೂ ಸೀತಕ್ಕ ಎಂದು ಗುರುತಿಸಲ್ಪಟ್ಟ 52 ವರ್ಷದ ಈ ಹಳ್ಳಿಗಾಡಿನ ಅಪ್ಪಟ ಮಹಿಳೆಯ ಕಥನ ಅಚ್ಚರಿ ಹುಟ್ಟಿಸುವಂತಹದ್ದು. ದನಸರಿ ಅನಸೂಯಾ ಈಗ ಡಾ.ದನಸರಿ ಅನುಸೂಯಾ ಮತ್ತು ತೆಲಂಗಾಣ ದ ಸಚಿವೆ. ತಾನು…

ಅಧಿಕಾರಿಗಳ ವಿರುದ್ಧ ದೂರು ಕೇಳಿಬಂದರೆ ಶಿಸ್ತು ಕ್ರಮ: ಜಿಲ್ಲಾ ಉಸ್ತುವಾರಿ ಸಚಿವ ಬಿ.ನಾಗೇಂದ್ರ ಎಚ್ಚರಿಕೆ

ಬಳ್ಳಾರಿ,ಡಿ.2: ‘ನನ್ನ ಉಸ್ತುವಾರಿ ಜಿಲ್ಲೆಯಲ್ಲಿ ವಿವಿಧ ಇಲಾಖೆಗಳಿಗೆ ಸಂಬಂಧಿಸಿದಂತೆ ಸಾರ್ವಜನಿಕರಿಂದ ದೂರು ಬಂದರೆ ಸುಮ್ಮನಿರುವುದಿಲ್ಲ ಅಂತಹ ಇಲಾಖೆಯ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗುವುದು’ ಎಂದು ಯುವ ಸಬಲೀಕರಣ, ಕ್ರೀಡೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ…

ಸಂವಿಧಾನ ದಿನಾಚರಣೆ: ಎಲ್ಲರಿಗೂ ಹಕ್ಕುಗಳ ರಕ್ಷಣೆ ಹಾಗೂ ಮಾನವೀಯತೆ ಸಂವಿಧಾನದ ಆಶಯ -ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ನ. 26: ಭಾರತದ ಸಂವಿಧಾನ ಅತ್ಯಂತ ಶ್ರೇಷ್ಠವಾಗಿದ್ದು,ಭಾರತದ ದೇಶದ ಎಲ್ಲರಿಗೂ ಹಕ್ಕುಗಳ ರಕ್ಷಣೆ ಹಾಗೂ ಮಾನವೀಯತೆಯೇ ಸಂವಿಧಾನದ ಆಶಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಭಾನುವಾರ ವಿಧಾನಸೌಧದಲ್ಲಿ ಸಂವಿಧಾನ ದಿನಾಚರಣೆಯ ಅಂಗವಾಗಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಪುಷ್ಪಾರ್ಚನೆ ಮಾಡಿದ…

ದೇಶದಲ್ಲಿ ಶಿಕ್ಷಣ-ಸಂಶೋಧನಾ ಸಂಸ್ಥೆಗಳ ಸ್ಥಾಪನೆ, ತಂತ್ರಜ್ಞಾನ ಅಭಿವೃದ್ಧಿ ನೆಹರೂ ಸಾಧನೆ -ಮುಖ್ಯಮಂತ್ರಿ ಸಿದ್ಧರಾಮಯ್ಯ

ಬೆಂಗಳೂರು, ನ. 14: ದೇಶದಲ್ಲಿ ಶಿಕ್ಷಣ ಸಂಸ್ಥೆಗಳು, ವಿಜ್ಞಾನ-ಸಂಶೋಧನಾ ಸಂಸ್ಥೆಗಳು, ತಂತ್ರಜ್ಞಾನ, ವಿಶ್ವ ವಿದ್ಯಾಲಯಗಳ ಸ್ಥಾಪನೆ ಮಾಡಿದ್ದು, ಕೃಷಿ ಅಭಿವೃದ್ಧಿ ನೆಹರೂ ಅವರ ದೂರದೃಷ್ಟಿಯ ಸಾಧನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಕೆಪಿಸಿಸಿ ಕಚೇರಿಯಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಮಾಜಿ ಪ್ರಧಾನಿ…

ಪರಿಶಿಷ್ಟ ಪಂಗಡ ಸಮುದಾಯಗಳ ಅಭಿವೃದ್ಧಿಗೆ ಪ್ರತ್ಯೇಕ ಸಚಿವಾಲಯ ಸ್ಥಾಪನೆ -ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ಅ. 28 : ಪರಿಶಿಷ್ಟ ಪಂಗಡಗಳ ಕಲ್ಯಾಣ ಕಾರ್ಯಕ್ರಮಗಳ ಅನುಷ್ಠಾನಕ್ಕಾಗಿ ಪ್ರತ್ಯೇಕ ಸಚಿವಾಲಯವನು ಸ್ಥಾಪಿಸಲು ಸರ್ಕಾರ ತೀರ್ಮಾನಿಸಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಾಲ್ಮೀಕಿ ಜಯಂತಿಯ ಅಂಗವಾಗಿ ಇಂದು ವಿಧಾನಸೌಧದ  ಬ್ಯಾಂಕ್ವೆಟ್ ಸಭಾಂಗಣದಲ್ಲಿ ಆಯೋಜಿಸಿದ್ದ ಮಹರ್ಷಿ  ವಾಲ್ಮೀಕಿ ಜಯಂತಿ…